ಗಂಗಾವತಿ: ಇಲ್ಲಿನ ಬೇಥಲ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು 2025-26ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಅಂಕಗಳು ಪಡೆದು, ಕಾಲೇಜಿಗೆ ಉತ್ತಮ ಫಲಿತಾಂಶ ನೀಡಿ, ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ.

ಕಲಾ ಮತ್ತು ವಾಣಿಜ್ಯ ವಿಭಾಗದಿಂದ ಈ ಬಾರಿ 27 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 58 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 09 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ವಿದ್ಯಾರ್ಥಿನಿ ದೀಪಾ 571 ಅಂಕ, ಜೋಯಾಖಾನ್ 564 ಅಂಕ ಪಡೆದು ಕಾಲೇಜಿಗೆ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜರಾಫಿರ್ದೋಸ್ 581 ಅಂಕ, ಶ್ರೀಪ್ರಿಯಾ ಜಿ. ಪಾನ ಗಂಟಿ 573 ಅಂಕ, ದೀಕ್ಷಾತಟ್ಟಿ 570 ಅಂಕ ಪಡೆದಿದ್ದಾರೆ.

ವಾಣಿಜ್ಯ ವಿಭಾಗದ ವ್ಯವಹಾರ ಅಧ್ಯಯನ ವಿಷಯ ದಲ್ಲಿ ಜರಾ ಫಿರ್ದೋಸ್, ಅಫ್ಸಾನಾ ಬೇಗಂ 100 ಅಂಕ, ರಾಜ್ಯಶಾಸ್ತ್ರ ವಿಷಯದಲ್ಲಿ ದೀಪಾ, ಜೋಯಾಖಾನ್ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಉಪನ್ಯಾಸಕರು, ಕಾಲೇಜು ಮಂಡಳಿ, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-35-1010452622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.