ಬೆಟ್ಟದಪುರ: ಸಮೀಪದ ಹಾರನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಉಚಿತ ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಈ ಶೈಕ್ಷಣಿಕ ವರ್ಷದಿಂದ ಉಚಿತ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಕಲಾ ವಿಭಾಗಕ್ಕೆ ಈಗಾಗಲೇ ದಾಖಲಾತಿ ಆರಂಭವಾಗಿದ್ದು, ಅನುಭವ ಹೊಂದಿದ ಹಾಗೂ ನುರಿತ ಉಪನ್ಯಾಸಕರ ತಂಡದಿಂದ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ರಾಂಶುಪಾಲ ಎ.ಎಸ್. ಪ್ರಕಾಶ್ (ಮೊ: 9743255836) ಹಾಗೂ ಉಪನ್ಯಾಸಕ ಲೋಕೇಶ್ (ಮೊ: 9972630401) ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-38-998341802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.