ಹಾಸನ: ನಗರದ ಅಧ್ಯಯನ ಪಿಯು ಕಾಲೇಜು ತನ್ನ ಮೊದಲನೇ ಫಲಿತಾಂಶದಲ್ಲೇ ವಿಶಿಷ್ಟ ಸಾಧನೆ ಮಾಡಿದ್ದು, ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕ ಗಳಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳು ಗಣಿತ, ಭೌತವಿಜ್ಞಾನ, ರಸಾಯನವಿಜ್ಞಾನ, ಜೀವವಿಜ್ಞಾನ, ಗಣಕ ವಿಜ್ನಾನ, ಕನ್ನಡ, ಸಂಸ್ಕೃತ, ಹಿಂದಿ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಉನ್ನತ ಅಂಕಗಳನ್ನು ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 211 ವಿದ್ಯಾರ್ಥಿಗಳಲ್ಲಿ 132 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 74 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಎಸ್ಎಸ್ಎಲ್ಸಿಯಿಂದ ಪಿಯುಸಿವರೆಗೆ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿ ಹೆಚ್ಚಿರುವುದು ಸಂಸ್ಥೆಯ ಗುಣಮಟ್ಟದ ತರಬೇತಿ ಮತ್ತು ವಿದ್ಯಾರ್ಥಿಗಳ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-36-1362624163

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.