ಹಾಸನ: ನಗರದ ಬ್ರಿಲಿಯಂಟ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಶುಕ್ರವಾರ ಅಭಿವಿನ್ಯಾಸ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಹಾಗೂ ಆಡಳಿತಾಧಿಕಾರಿ ಪ್ರೊ. ಜವರಾಜೇಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಎರಡು ವರ್ಷದ ಪಿಯುಸಿ ಅಧ್ಯಯನದ ಕುರಿತಾಗಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ತಿಳಿಸಿಕೊಟ್ಟರು.

ಸಂಸ್ಥೆಯ ಕಾರ್ಯದರ್ಶಿ ಡಾ. ಎಚ್.ಎಸ್ ಅನಿಲ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಪ್ರಾಂಶುಪಾಲೆ ಪುಷ್ಪಾ ಇ., ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ, ನೀಟ್ ಕುರಿತು ವಿಚಾರಗಳನ್ನು ಹಂಚಿಕೊಂಡರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ರಾಜ್ಯಕ್ಕೆ 7ನೇ ಸ್ಥಾನ, ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಹೇಮಲತಾ ಟಿ.ಆರ್. ಮತ್ತು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 599 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಭುವನ್ ಎಂ.ಡಿ. ಅವರನ್ನು ಸನ್ಮಾನಿಸಲಾಯಿತು.

ವಿಶೇಷ ಅತಿಥಿಗಳಾಗಿದ್ದ ಬೆಂಗಳೂರಿನ ಚಿಂತಕ ಥಾಮಸ್ ಜಾನ್ ರೋಸ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ವಿನಯ, ಪೋಷಕರ ಮೇಲಿನ ಪ್ರೀತಿ, ಗುರುಗಳಿಗೆ ತೋರಬೇಕಾದ ಗೌರವ, ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಅಧ್ಯಯನ ಮಾಡುವ ವಿಧಾನ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ವ್ಯವಸ್ಥಾಪಕ ರಘುಕುಮಾರ್ ಕೆ.ವಿ., ಉಪನ್ಯಾಸಕರು, ಸಿಬ್ಬಂದಿ, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-36-137234200

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.