ಹಾವೇರಿ: ರಾಜ್ಯದಾದ್ಯಂತ ಏ. 30ರಿಂದ ಮೇ 13ರವರೆಗೆ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ–2 ನಡೆಯಲಿದ್ದು, ಪರೀಕ್ಷೆಗೆ ಹಾಜರಾಗಲು ಜಿಲ್ಲೆಯಲ್ಲಿ 6,230 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯ 7 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ‘ಪರೀಕ್ಷೆ ಸಿದ್ಧತೆಯ ಪೂರ್ವಭಾವಿ ಸಭೆ’ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್, ‘ಯಾವುದೇ ಲೋಪವಾಗದಂತೆ, ಗೊಂದಲಕ್ಕೆ ಆಸ್ಪದ ನೀಡದಂತೆ ನಿಯಮಗಳ ಪ್ರಕಾರ ಪರೀಕ್ಷೆ ನಡೆಸಬೇಕು. ಎಲ್ಲರೂ ಪರೀಕ್ಷಾ ಗೌಪ್ಯತೆ ಕಾಪಾಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮಗೆ ವಹಿಸಿರುವ ಕೆಲಸಗಳನ್ನು ಲೋಪವಾಗದಂತೆ ಜವಾಬ್ದಾರಿಯಿಂದ ಮಾಡಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

‘ಪ್ರಶ್ನೆ ಪತ್ರಿಕೆ ಬಂಡಲ್ ತೆಗೆದುಕೊಂಡು ಹೋಗಲು ಪ್ರತಿ ತಾಲ್ಲೂಕಿಗೂ ತಹಶೀಲ್ದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ವಾಹನಕ್ಕೆ ಜಿಪಿಎಸ್ ಕಡ್ಡಾಯಗೊಳಿಸಲಾಗಿದೆ. ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಕೇಂದ್ರಕ್ಕೆ ತಲುಪಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು’ ಎಂದರು.

‘ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರು, ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಇ–ಕ್ಯಾಮೆರಾ, ಲ್ಯಾಪ್ಟಾಪ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್ಗಳನ್ನು ಬಳಸುವಮತಿಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಜೆರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಬೇಕು’ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರಿ, ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಹಾಗೂ ಇತರರು ಸಭೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-22-1475876799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.