ಹೊಳೆಹೊನ್ನೂರು: ಸಮೀಪದ ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಎನ್.ಮದನ್ ದ್ವಿತೀಯ ಪಿಯುಸಿ 2ನೇ ಪರೀಕ್ಷೆಯಲ್ಲಿ ಒಟ್ಟು 4 ಅಂಕ ಹೆಚ್ಚಿಸಿಕೊಂಡಿದ್ದು, ಒಟ್ಟು 598 ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ್ದಾನೆ.

ಕನ್ನಡ ಭಾಷೆ, ವ್ಯವಹಾರ ಅಧ್ಯಯನ, ಅರ್ಥಶಾಸ್ತ್ರ, ಲೆಕ್ಕಶಾಸ್ತ್ರ, ಸಂಖ್ಯಾಶಾಸ್ತ್ರ ವಿಷಯದಲ್ಲಿ ತಲಾ 100, ಇಂಗ್ಲಿಷ್ ಭಾಷೆಯಲ್ಲಿ 98 ಅಂಕಗಳಿಸಿದ್ದಾನೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸೌಜನ್ಯ 593 ಅಂಕ ಪಡೆದು ರಾಜ್ಯಕ್ಕೆ 8ನೇ ಸ್ಥಾನ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಮಿರಾ 590 ಅಂಕ ಪಡೆದು ರಾಜ್ಯಕ್ಕೆ 10ನೇ ಸ್ಥಾನ ಪಡೆದಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲ ಎಸ್.ಎಂ.ಜೋಸೆಫ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಇ.ಎಸ್.ಶ್ರೀಕಾಂತ್, ಸಂಸ್ಥೆಯ ಆಡಳಿತಾಧಿಕಾರಿ ಶ್ರೀಕಾಂತ್ ಎಂ.ಹೆಗಡೆ, ಅಧ್ಯಕ್ಷ ತಲವಾನೆ ಪ್ರಕಾಶ್, ಕಾರ್ಯದರ್ಶಿ ಬಿ.ಎಲ್.ನೀಲಕಂಠಮೂರ್ತಿ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-1081355201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.