ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬಂಟರ ಸಂಘ ಹಾಗೂ ಮಾತೃಭೂಮಿ ಚಾರಿಟೇಬಲ್ ಟ್ರಸ್ಟ್ ಸಹಯೋಗದ ಆರ್.ಎನ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಏಪ್ರಿಲ್ 5ರಂದು ಬೆಳಿಗ್ಗೆ 10ಕ್ಕೆ ‘ಮಾತೃಬಂಟ ಪ್ರತಿಭಾ ಸ್ಪಂದನ' ಲಿಖಿತ ಪರೀಕ್ಷೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಮ್ಯಾನೇಜಿಂಗ್ ಟ್ರಸ್ಟಿ ಎಂ. ಸತೀಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಐದು ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುತ್ತದೆ. ಶೈಕ್ಷಣಿಕವಾಗಿ ಸಾಧನೆ ಮಾಡಿದ ಮೂವರು ವಿದ್ಯಾರ್ಥಿಗಳು ಹಾಗೂ ಕ್ರೀಡಾ ಸಾಧನೆ ಮಾಡಿದ ಒಬ್ಬ ವಿದ್ಯಾರ್ಥಿ ಹಾಗೂ ಸಾಂಸ್ಕೃತಿಕ ಸಾಧನೆ ಮಾಡಿದ ಇನ್ನೊಬ್ಬ ವಿದ್ಯಾರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ರಿಯಾಯಿತಿ ಇದೆ. ಈ ಬಗ್ಗೆ ಗೂಗಲ್ ಫಾರಂ ಮೂಲಕ ನೋಂದಾಯಿಸಿಕೊಳ್ಳಬೇಕು. ಗಣಿತ ಹಾಗೂ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-24-312776665

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.