ಹುಬ್ಬಳ್ಳಿ: ಇಲ್ಲಿನ ವಿಶ್ವಭಾರತಿ ಬಾಲಕಿಯರ ಪಿಯು ಕಾಲೇಜಿನ ವಿದ್ಯಾರ್ಥಿನಿಯರು 2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 74, ಕಲಾ ವಿಭಾಗದಲ್ಲಿ ಶೇ 70ರಷ್ಟು ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗದಲ್ಲಿ ಸ್ನೇಹಾ ಸವಾಸೆ ಶೇ 93ರಷ್ಟು ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಚನ್ನಮ್ಮ ಚಲವಾದಿ (ಶೇ 88) ದ್ವಿತೀಯ, ಮಧು ವಗ್ಗರ (ಶೇ 87) ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮೂವರು ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಸಲ್ಮಾ ಅಮದಣ್ಣವರ ಶೇ 85ರಷ್ಟು ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಐಶ್ವರ್ಯ ಕುರುಬರ (ಶೇ 83) ದ್ವಿತೀಯ, ಅಶ್ವಿನಿ ಶೇರೆವಾಡ (ಶೇ 76) ತೃತೀಯ ಸ್ಥಾನ ಪಡೆದಿದ್ದಾರೆ. 18 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ಧಾರೆ. ವಿದ್ಯಾರ್ಥಿನಿಯರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ವಿ.ಆರ್.ಕಿರೇಸೂರ, ಪ್ರಾಚಾರ್ಯ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-24-577834866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.