ಹುಲಸೂರ: ಶರಣ ಉರಿಲಿಂಗ ಪೆದ್ದಿ ಮಠ, ಬೇಲೂರು ಹಾಗೂ ಶರಣ ಉರಿಲಿಂಗ ಪೆದ್ದಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಸಾನ್ನಿಧ್ಯ ವಹಿಸಿದ್ದ ಪಂಚಾಕ್ಷರಿ ಸ್ವಾಮೀಜಿ ಮಾತನಾಡಿ, ‘ಶರಣರ ನಾಡಾದ ಬೇಲೂರಿನಲ್ಲಿ ಶೈಕ್ಷಣಿಕ ಕ್ರಾಂತಿ ನಡೆಯುತ್ತಿರುವುದು ಸಂತೋಷದ ಸಂಗತಿ ಎಂದ ಅವರು, ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸವನ್ನು ಉತ್ತಮಗೊಳಿಸಿಕೊಂಡು ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಮಾಜ ಸೇವೆಯಲ್ಲಿ ತೊಡಗಬೇಕು’ ಎಂದರು.

ಉದ್ಘಾಟಕರಾಗಿ ಭಾಗವಹಿಸಿದ್ದ ಹುಲಸೂರಿನ ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ‘ಉರಿಲಿಂಗ ಪೆದ್ದಿ ಮಠದ ಆಶ್ರಯದಲ್ಲಿ ಬೇಲೂರು ರಾಜ್ಯದಾದ್ಯಂತ ಹೆಸರುವಾಸಿಯಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಸನ್ಮಾರ್ಗದ ಕಡೆ ಸಾಗುತ್ತಿರುವುದು ಶ್ಲಾಘನೀಯ’ ಎಂದರು.

ಬೇಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶರಣ ಬಸಪ್ಪ ಬಿರಾದಾರ ಮಾತನಾಡಿ, ‘25 ವರ್ಷಗಳ ಬಳಿಕ ಶಾಲೆಗೆ ಶೇ 100ರಷ್ಟು ಫಲಿತಾಂಶ ಲಭಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ಹಾಗೂ ಪಾಲಕರ ಪರಿಶ್ರಮ ಮುಖ್ಯ ಕಾರಣ’ ಎಂದು ಹೇಳಿದರು.

ಶಿಕ್ಷಕ ಸಂಜೀವಕುಮಾರ ನಡುಕರ, ಹುಲಸೂರು ತಾಲ್ಲೂಕು ಪಂಚಾಯಿತಿ ಇಒ ಮಹಾದೇವ ಜಮ್ಮು ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿಡಿಒ ಬಸಪ್ಪ ಖಡ್ಡೆ, ವಕೀಲ ಸಂಜೀವಕುಮಾರ ಖೇಲೆ, ಶರಣಪ್ಪ ಗದಲೇಗಾಂವ, ಗುರುನಾಥ ವಿಠ್ಠಲ ವಾಗ್ಮಾರೆ, ಅಶೋಕ ರಾಜೋಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಭೀಮಶ್ಯಾ ವಾಗ್ಮಾರೆ ಸ್ವಾಗತಿಸಿದರು.ಮಹಾಲಿಂಗ ದೇವರು ಕಾರ್ಯಕ್ರಮ ನಿರೂಪಿಸಿದರು. ಗಣೇಶ ರಾಧು ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-33-725907712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.