ಕಲಬುರಗಿ: ನಗರದ ಚಂದ್ರಕಾಂತ ಪಾಟೀಲ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಅಭೂತಪೂರ್ವ ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ.ಶಿವಶಂಕರರಾವ ಎಚ್.ಬಿ. ತಿಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 40 ವಿದ್ಯಾರ್ಥಿಗಳು ಅಗ್ರಶ್ರೇಣಿ ಪಡೆದಿದ್ದು, 131 ಪ್ರಥಮ ಶ್ರೇಣಿ, 29 ದ್ವಿತೀಯ ಶ್ರೇಣಿ, ಉಳಿದಂತೆ ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈ ವಿಭಾಗದ ರಕ್ಷಿತಾ ಭೀಮುನಾಯ್ಕ 566 ಅಂಕ ಪಡೆದು ಕಾಲೇಜಿಗೆ ಟಾಪರ್ ಆಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 9 ವಿದ್ಯಾರ್ಥಿಗಳು ಅಗ್ರಶ್ರೇಣಿ, 44 ಪ್ರಥಮ ಶ್ರೇಣಿ, 12 ದ್ವಿತೀಯ ಹಾಗೂ ಇನ್ನುಳಿದ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸುಮಯ್ಯಾ ಖಾಜಾಮಿಯಾ 95.83, ಭಾಗ್ಯಲಕ್ಷ್ಮಿ ಎಸ್ 95.33, ಸ್ವಾತಿ ಎಚ್.ಬಸವರಾಜ 93 ಟಾಪರ್ ಆಗಿದ್ದಾರೆ.

‘ನಮ್ಮ ಸಂಸ್ಥೆ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುತ್ತಾ ಬಂದಿದೆ. ನಿರಂತರ ಬೋಧನೆ, ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ ಕಾಲೇಜಿಗೆ ಬೆಸ್ಟ್ ರಿಸಲ್ಟ್ ಬಂದಿದ್ದು ಸಂತಸ ತಂದಿದೆ. ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ’ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಬಿ.ಜಿ.ಪಾಟೀಲ ಹಾರೈಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ವ್ಯವಸ್ಥಾಪಕ ನಿರ್ದೇಶಕ ಚಂದ್ರಕಾಂತ ಬಿ.ಪಾಟೀಲ, ಕಾರ್ಯನಿರ್ವಾಹಕ ನಿರ್ದೇಶಕ ಕೈಲಾಸ ಬಿ.ಪಾಟೀಲ ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-34-887117164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.