ಕಲಬುರಗಿ: ಡೊನೇಷನ್ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಅಕ್ಕಣ್ಣ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಪ್ರಥಮ ಪಿಯುಸಿಗೆ ಪ್ರವೇಶ ಆರಂಭವಾಗಿದೆ. ಪ್ರವೇಶ ಬಯಸಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಎಡತಾಕುತ್ತಿದ್ದಾರೆ. ಡೊನೇಷನ್ ಹಾವಳಿ ಹೆಚ್ಚಾಗಿರುವುದರಿಂದ ನಿರಾಶೆ ಉಂಟಾಗುತ್ತಿದೆ ಎಂದು ತಿಳಿಸಿದರು.

ಕಾಲೇಜುಗಳು ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಿವೆ. ಹೆಚ್ಚಿನ ದರಕ್ಕೆ ಸಮವಸ್ತ್ರ, ಶೂಗಳನ್ನು ಕಾಲೇಜಿನಲ್ಲಿಯೇ ಖರೀದಿಸಲು ಒತ್ತಾಯಿಸುತ್ತಿವೆ. ಜೆಇಇ, ನೀಟ್ ಹೆಸರಿನಲ್ಲಿ ಕಾಲೇಜುಗಳಲ್ಲಿ ನಿಯಮಬಾಹಿರವಾಗಿ ಕೋಚಿಂಗ್ ಸೆಂಟರ್ ನಡೆಸುತ್ತಿವೆ ಎಂದು ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಎಂ.ಕಾಂಬಳೆ ಆರೋಪಿಸಿದರು.

ಕಾಲೇಜುಗಳಲ್ಲಿ ಇಲಾಖೆ ನಿಗದಿ ಪಡಿಸಿದ ಶುಲ್ಕದ ವಿವರದ ಪಟ್ಟಿ ಹಾಕದೇ ಇರುವುದರಿಂದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ವಾರ್ಷಿಕ ಶುಲ್ಕದ ಜೊತೆ ಇತರೆ ಶುಲ್ಕದ ಮಾಹಿತಿ ಸಿಗುತ್ತಿಲ್ಲ. ನಿಯಮಗಳ ಪ್ರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳು, ಇಲಾಖೆ ನಿಗದಿಪಡಿಸಿದ ಶುಲ್ಕದ ವಿವರ ಪ್ರದರ್ಶಿಸಬೇಕು ಎಂದರು.

ಡೊನೇಷನ್ ಹಾವಳಿ ತಡೆಗಟ್ಟಲು ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ್ ಪ್ರಾಧಿಕಾರ’ ರಚಿಸಬೇಕು ಎಂದು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದೇವೆ. ಇದರಲ್ಲಿ ಕೇವಲ ಅಧಿಕಾರಿಗಳಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳೂ ಇರಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಕೊಡಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಂಟಿ ಸಭೆ ಕರೆದು, ಡೊನೇಷನ್ ಹಾವಳಿಗೆ ಅಂತ್ಯ ಹಾಡಬೇಕು. ನಿಯಮಗಳ ಪಾಲನೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ವಕೀಲ ಶ್ರೀಮಂತ, ಭವಾನಿ ಪ್ರಸಾದ್, ವೈ.ಎಸ್.ಸಿಂದಗೇರಿ, ವಿದ್ಯಾರ್ಥಿಗಳಾದ ನಾಗಪ್ಪ, ಮಹಮದ್ ಅಸ್ಲಮ್, ಸಿದ್ಧಾರ್ಥ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-34-1409529017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.