ಕಲಬುರಗಿ: ನಗರದ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ 2026–27ನೇ ಶೈಕ್ಷಣಿಕ ತರಗತಿಗಳ ಆರಂಭೋತ್ಸವ ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿನಿಯರನ್ನು ಹೂವು ಹಾಗೂ ಸಿಹಿ ಹಂಚುವ ಮೂಲಕ ಸ್ವಾಗತಿಸಲಾಯಿತು. ಬಳಿಕ ಸರಸ್ವತಿ ದೇವಿಗೆ ಪೂಜೆ ಸಲ್ಲಿಸಲಾಯಿತು.

ಹೈಕ ಶಿಕ್ಷಣ ಸಂಸ್ಥೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ಸಂಚಾಲಕ ನಾಗಣ್ಣ ಘಂಟಿ ಅವರು, ಜ್ಯೋತಿ ಬೆಳಗಿಸುವುದರ ಮೂಲಕ ತರಗತಿಗಳಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ವಿದ್ಯಾರ್ಥಿನಿಯರು ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.

ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ರಾಜೇಂದ್ರ ಕೊಂಡಾ ಮಾತನಾಡಿ, ‘ನಿಮ್ಮ ತಂದೆ–ತಾಯಿಗಳ ಪಾತ್ರ ಬಹುಮುಖ್ಯವಾಗಿದ್ದು, ಅವರಿಗೆ ಕೀರ್ತಿ ತರುವ ಕಾರ್ಯ ಮಾಡಬೇಕು. ಜೀವನವನ್ನು ಉಜ್ವಲಗೊಳಿಸಿಕೊಳ್ಳಬೇಕು’ ಎಂದು ಹೇಳಿದರು.

ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಮೋಹನರಾಜ ಪತ್ತಾರ ಮಾತನಾಡಿ, ‘ನಮ್ಮ ಕಾಲೇಜು ಕೇವಲ ಶೈಕ್ಷಣಿಕ ಸಾಧನೆಗೆ ಮಾತ್ರವಲ್ಲ, ನೈತಿಕ ಮೌಲ್ಯ, ಶಿಸ್ತು, ನಾಯಕತ್ವ ಗುಣ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಬದ್ಧವಾಗಿದೆ. ಎಲ್ಲ ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗಬೇಕು. ಗುರುಗಳು, ಪೋಷಕರನ್ನು ಗೌರವಿಸಬೇಕು. ಶಿಸ್ತು ಪಾಲಿಸಬೇಕು. ಪ್ರತಿ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವೈಫಲ್ಯಕ್ಕೆ ಭಯ ಪಡಬಾರದು. ವೈಫಲ್ಯಗಳೇ ಯಶಸ್ಸಿನ ಮೆಟ್ಟಿಲುಗಳು. ಏಕತೆ, ಸಮರ್ಪಣೆ, ಸಕಾರಾತ್ಮಕ ಮನೋಭಾವ ದೊಂದಿಗೆ ಕೆಲಸ ಮಾಡಿ, ಸಂಸ್ಥೆಗೆ ಇನ್ನಷ್ಟು ಕೀರ್ತಿ ತರೋಣ’ ಎಂದು ಹೇಳಿದರು.

ವಿದ್ಯಾರ್ಥಿನಿಯರಾದ ಅಮೃತಾ ವಾಣಿ ಮತ್ತು ಅನುಪಲ್ಲವಿ ಪ್ರಾರ್ಥಿಸಿದರು. ಉಪನ್ಯಾಸಕಿ ಜಗದೇವಿ ಚಿಕ್ಕೇಗೌಡ ಅವರು ಸರಸ್ವತಿ ಶ್ಲೋಕ ಪಠಿಸಿದರು. ಸಿಬ್ಬಂದಿ ಕಾರ್ಯದರ್ಶಿ ಕನ್ಯಾಕುಮಾರಿ ಗಂಧಿಗುಡಿ ಸ್ವಾಗತಿಸಿದರು. ಉಪನ್ಯಾಸಕಿ ಸಂತೋಷಿ ನಿರೂಪಿಸಿದರು. ಬೋಧಕ– ಬೋಧಕೇತರ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-34-1916451436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.