ಕಲಬುರ್ಗಿ: ‘ಶೈಕ್ಷಣಿಕ ಸಮಸ್ಯೆಗಳು, ಗೊಂದಲದ ಇಲಾಖೆಯ ಆದೇಶಗಳ ಒತ್ತಡಗಳ ನಡುವೆಯೂ ಈ ಬಾರಿಯ ಪಿಯುಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿದ ಉಪನ್ಯಾಸಕರು ಅಭಿನಂದನೆಗೆ ಅರ್ಹರು’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹೇಳಿದರು.

ನಗರದ ಸರ್ಕಾರಿ ಬಾಲಿಕೆಯರ ಪದವಿಪೂರ್ವ ಕಾಲೇಜು ಹಾಗೂ ಆದರ್ಶನಗರ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಜರುಗಿದ 2026–27ನೇ ಸಾಲಿನ ಕಾಲೇಜು ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಿರಂತರ ಪರಿಶ್ರಮ, ಬೋಧನಾ ಕೌಶಲ ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ನೀಡಿದ ಮಾರ್ಗದರ್ಶನವು ಅತ್ಯುತ್ತಮ ಫಲಿತಾಂಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಸರ್ಕಾರಿ ಕಾಲೇಜುಗಳ ಸಾಧನೆ ಮತ್ತು ವಿದ್ಯಾರ್ಥಿಗಳ ಉತ್ತೀರ್ಣತೆಯ ಪ್ರಮಾಣದಲ್ಲಿ ದಾಖಲಾಗಿರುವ ಏರಿಕೆಯು ಶ್ಲಾಘನೀಯ’ ಎಂದು ಹೇಳಿದರು.

‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಪನ್ಯಾಸಕರ ಕೊರತೆಯಿದೆ. ಹೀಗಾಗಿ ಫಲಿತಾಂಶದಲ್ಲಿ ಹೆಚ್ಚಿನ ಸ್ಥಾನ ಗಳಿಸದೇ ಇರಬಹುದು. ಆದರೆ ಶೇಕಡಾವಾರು ಫಲಿತಾಂಶದಲ್ಲಿ ಸುಧಾರಣೆಯಾಗಿದ್ದು, ರಾಜ್ಯಕ್ಕೆ ಕಲಾ ವಿಭಾಗದಲ್ಲಿ ಪ್ರಥಮ, ರ್ಯಾಂಕ್ ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯದ 10 ರ್ಯಾಂಕ್ಗಳ ಪಟ್ಟಿಯಲ್ಲಿ ಗುರುತಿಸಿ ಕೊಂಡಿರುವುದು ನಮ್ಮ ಜಿಲ್ಲೆಗೆ ಸಂತಸದ ವಿಷಯ. ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ತಮ್ಮ ಜಾಣ್ಮೆಯನ್ನು ಈ ಭಾರಿಯ ಫಲಿತಾಂಶದ ಸ್ಪಷ್ಟವಾಗಿ ನಿರೂಪಿಸಿದ್ದಾರೆ’ ಎಂದು ಹೇಳಿದರು.

‘ಪಿಯುಸಿ ಜೀವನವು ಮಾನವನ ಜೀವನದ ಸುವರ್ಣ ಕಾಲ ಮತ್ತು ಭವಿಷ್ಯದ ಯಶಸ್ಸಿಗೆ ಭದ್ರ ಬುನಾದಿಯಾಗಿದೆ. ಈ ಹಂತದಲ್ಲಿ ಕಲಿಯುವ ಗುಣಗಳು, ಶಿಸ್ತು ಮತ್ತು ಮೌಲ್ಯಗಳು ವ್ಯಕ್ತಿಯ ಇಡೀ ಜೀವನದ ದಿಕ್ಕನ್ನು ನಿರ್ಧರಿಸುತ್ತವೆ. ಭವಿಷ್ಯದಲ್ಲಿ ಏನಾಗಬೇಕು ಎಂಬ ಸ್ಪಷ್ಟ ಗುರಿಯನ್ನು ರೂಪಿಸಿಕೊಳ್ಳಲು ಇದು ಸೂಕ್ತ ಸಮಯ’ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಶಶೀಲ್ ನಮೋಶಿ ಅವರು ಹೂವು ನೀಡಿ ಸ್ವಾಗತಿಸಿದರು. ಸರ್ಕಾರಿ ಬಾಲಿಕೆಯರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ದೇವನಗೌಡ ಪಾಟೀಲ, ಆದರ್ಶನಗರ ಕಾಲೇಜಿನ ಪ್ರಾಚಾರ್ಯ ರಾಜು ಗಂಗಾಧರ, ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ. ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ನರಸಪ್ಪ ರಂಗೋಲಿ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-784509897

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.