ಕೆಜಿಎಫ್: ಕ್ಯಾಸಂಬಳ್ಳಿ ಗ್ರಾಮದಲ್ಲಿ ಸರ್ಕಾರಿ ಪಿಯು ಕಾಲೇಜು ಸ್ಥಾಪನೆಗೆ ಸರ್ಕಾರ ಒಪ್ಪಿಗೆ ನೀಡಿದ್ದರೂ, ಇಲಾಖೆ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಕೂಡಲೇ ಮುಂಬರುವ ಶೈಕ್ಷಣಿಕ ವರ್ಷದಿಂದ ಪಿಯು ಕಾಲೇಜು ಪ್ರಾರಂಭಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.

ಕ್ಯಾಸಂಬಳ್ಳಿ ಸುತ್ತಮುತ್ತ ಎಂಟು ಖಾಸಗಿ ಮತ್ತು ಸರ್ಕಾರಿ ಪ್ರೌಢಶಾಲೆಗಳು ಇವೆ. ಅವುಗಳೆಲ್ಲವೂ ಗಡಿ ಅಂಚಿನಲ್ಲಿವೆ. ಪಿಯು ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ಹೋಗಲು ಸಾಧ್ಯವಿಲ್ಲದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಸುತ್ತಿದ್ದಾರೆ. ಬಾಲಕಿಯರಿಗೆ ವಿವಾಹ ಮಾಡುವ ಕಾರ್ಯ ಕೂಡ ನಡೆಯುತ್ತಿವೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದಲ್ಲಿದ್ದ ಶೂನ್ಯ ದಾಖಲಾತಿ ಕಾಲೇಜನ್ನು ಕ್ಯಾಸಂಬಳ್ಳಿಗೆ ವರ್ಗಾ ಮಾಡಿ ಸರ್ಕಾರ ಆದೇಶ ಹೊರಡಿಸಿ ಒಂದು ವರ್ಷವಾದರೂ ಇದುವರೆವಿಗೂ ಕಾಲೇಜು ವರ್ಗಾವಣೆಗೊಂಡಿಲ್ಲ. ಮುಂಬರುವ ಶೈಕ್ಷಣಿಕ ವರ್ಷಕ್ಕಾದರೂ ಪಿಯು ಕಾಲೇಜನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಲಾಯಿತು.

ಕ್ಯಾಸಂಬಳ್ಳಿ ಸರ್ಕಾರಿ ಕಾಲೇಜಿಗೆ 12.20 ಎಕರೆ ಜಮೀನು ಮಂಜೂರಾಗಿದ್ದು, ಶಿಕ್ಷಣ ಮತ್ತು ಕಂದಾಯ ಇಲಾಖೆಯವರು ಸರ್ಕಾರಿ ಜಮೀನನ್ನು ಶಿಕ್ಷಣ ಇಲಾಖೆಗೆ ವಶಕ್ಕೆ ಪಡೆದು ಈ ಭಾಗದ ಜನರಿಗೆ ನೂತನ ಪ್ರೌಢಶಾಲೆ ಕಟ್ಟಡ ಕಟ್ಟಲು ಅನುವು ಮಾಡಿಕೊಡಬೇಕು. ಈಗಾಗಲೇ ಹಲವಾರು ಕಾರ್ಪೋರೇಟ್ ಕಂಪನಿಗಳು ಸಿಎಸ್ಆರ್ ಫಂಡ್ ನೀಡಲು ಮುಂದೆ ಬಂದಿದ್ದರೂ, ಅಧಿಕಾರಿಗಳು ಉಪಯೋಗಿಸಿಕೊಳ್ಳದ ಕಾರಣ, ಕಟ್ಟಡ ನೆನೆಗುದಿಗೆ ಬಿದ್ದಿದೆ. ಸರ್ಕಾರಿ ಕಾಲೇಜಿಗೆ ಮಂಜೂರಾದ ಜಾಗದಲ್ಲಿ ಗೋಕುಂಟೆ ನಿರ್ಮಾಣವಾಗಿದೆ. ಹಾಗಾಗಿ ಕಾಲೇಜು ಮತ್ತು ಪ್ರೌಢಶಾಲೆ ಜಾಗವನ್ನು ದುರಸ್ತಿ ಮಾಡಿ, ಕಾಂಪೌಂಡ್ ನಿರ್ಮಿಸಬೇಕೆಂದು ಮನವಿ ಮಾಡಿದರು.

ಸೋಮಸುಂದರ ರೆಡ್ಡಿ, ತ್ರಿಲೋಕ್, ಕೃಷ್ಣಾರೆಡ್ಡಿ, ಎಪಿಎಲ್ ರಂಗನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-18-1282713604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.