ಮಡಿಕೇರಿ: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಕೊಡಗು ಜಿಲ್ಲೆ 3 ನೇ ಸ್ಥಾನ ಪಡೆದಿರುವುದು ಎಲ್ಲರಲ್ಲೂ ಸಂತಸ ತರಿಸಿದೆ. ಆದರೆ, ಇವರಲ್ಲಿ ಶೇ 35, 40ರಷ್ಟು ಅಂಕ ಪಡೆದವರೂ ಇದ್ದಾರೆ. ಇವರು ಯಾವುದೇ ಕಾರಣಕ್ಕೂ ಎದೆಗುಂದಬಾರದು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಇಲಾಖೆ ಸಿಬ್ಬಂದಿಗಳಿಗಾಗಿ ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

ಇವರು ಶಿಕ್ಷಣದ ಜೊತೆಗೆ ಕ್ರೀಡೆ ಸೇರಿದಂತೆ ಆಸಕ್ತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಮೇಲೆ ಬರಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲೆಯ ಸಣ್ಣ ಸಣ್ಣ ಮೈದಾನಗಳಲ್ಲಿಯೂ ವಿವಿಧ ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಇದರಿಂದ ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗಿದೆ ಎಂದರು.

ಕ್ರೀಡೆಯಲ್ಲಿ ಸೋಲು-ಗೆಲುವುಗಳಿಗಿಂತ ಭಾಗವಹಿಸುವಿಕೆ ಅತಿಮುಖ್ಯ. ಸಣ್ಣ ವಯಸ್ಸಿನಲ್ಲಿಯೇ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡರೆ ಉತ್ತಮ ಪ್ರಜೆಗಳಾಗಿ ಬೆಳೆಯಬಹುದು ಎಂದು ಅಭಿಪ್ರಾಯಪಟ್ಟರು.

ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಮುನ್ನಡೆಯಬೇಕು ಎಂದರು.

ಕ್ರೀಡೆ ಎಂದರೆ ಕೊಡಗು, ಕೊಡಗು ಎಂದರೆ ಕ್ರೀಡೆ ಎಂಬಂತಾಗಿದೆ. ಜಿಲ್ಲೆಯಿಂದ ಅತಿ ದೊಡ್ಡ ಪ್ರಮಾಣದಲ್ಲಿ ದೇಶಕ್ಕೆ ಕ್ರೀಡಾಪಟುಗಳನ್ನು ನೀಡಿದ ಜಿಲ್ಲೆ ಕೊಡಗು ಆಗಿದೆ ಎಂದು ಹೇಳಿದರು.

ಬೇಸಿಗೆ ಕಾಲದಲ್ಲಿ ಜಿಲ್ಲೆಯಾದ್ಯಂತ ವಿವಿಧ ಕ್ರೀಡಾಕೂಟದ ಹಬ್ಬಗಳು ಜರುಗುವುದು ವಿಶೇಷ. ಆ ನಿಟ್ಟಿನಲ್ಲಿ ಕ್ರೀಡಾ ಪರಂಪರೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗುತ್ತಿದೆ ಎಂದು ಶ್ಲಾಘಿಸಿದರು.

ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಲೇಜುಗಳಲ್ಲಿಯೂ ಸಹ ಮಾನಸಿಕತೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಹಾಗೆಯೇ ಮಕ್ಕಳೇ ಹೆಚ್ಚಿನ ಒತ್ತಡ ತೆಗೆದುಕೊಂಡು ಮುನ್ನಡೆಯುತ್ತಿರುವುದನ್ನು ಕಾಣುತ್ತೇವೆ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಾದ ಡಾ.ಆನಂದ್, ಡಾ.ಸನತ್ ಕುಮಾರ್, ಆಹಾರ ಸುರಕ್ಷತೆ ಅಧಿಕಾರಿ ಡಾ.ಅನಿಲ್ ಧವನ್, ಡಾ.ಇಂಧೂದರ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಿಮ್ಮಯ್ಯ, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ನವೀನ್, ದೇವರಾಜು, ಶ್ರೀನಾಥ್, ಮಂಜುನಾಥ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-1189353323

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.