ಬೇತಮಂಗಲ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಗ್ರಾಮೀಣ ವಿದ್ಯಾರ್ಥಿಗಳನ್ನು ಸಮಾಜ ಸೇವಕ ವಿ. ಮೋಹನ್ ಕೃಷ್ಣ ಸತ್ಕರಿಸಿದರು. ಕೆಜಿಎಫ್ ತಾಲ್ಲೂಕಿನ ಗೆನ್ನೇರಹಳ್ಳಿಯ ಮದನ್ (596 ಅಂಕ) ಮತ್ತು ಪ್ರಿಯಾನಿ (590 ಅಂಕ) ಅವರನ್ನು ಆರ್.ಕೆ.ಫೌಂಡೇಶನ್ ವತಿಯಿಂದ ಅಭಿನಂದಿಸಲಾಯಿತು.

ಪ್ರತಿಭಾವಂತ ಈ ಇಬ್ಬರು ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು. ಮುಂದಿನ ಉನ್ನತ ಶಿಕ್ಷಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ತಾಲ್ಲೂಕಿನ ಯಾವುದೇ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ ₹1 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗಿ ರೆಡ್ಡಿ, ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಭಿಲಾಶ್ ರೆಡ್ಡಿ, ಪಿಯು ಕಾಲೇಜಿನ ಅಧ್ಯಕ್ಷ ಸತೀಶ್ ರೆಡ್ಡಿ, ಪ್ರಾಂಶುಪಾಲರಾದ ತೇಜಸ್ವಿನಿ, ಸಹ ಕಾರ್ಯದರ್ಶಿ ಮಂಜುನಾಥ, ಮುಖಂಡರಾದ ಬಾಬು ರೆಡ್ಡಿ, ಕೃಷ್ಣಪ್ಪ, ಗಂಗಿ ರೆಡ್ಡಿ, ರಾಜಪ್ಪ, ತೇಜ, ಶ್ರೀರಾಮ್ ರೆಡ್ಡಿ, ವಿವೇಕ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-18-740990962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.