ವೇಮಗಲ್: ಹೋಬಳಿಯ ಕ್ಯಾಲನೂರು ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಬೇಕೆಂಬ ನಿರಂತರ ಬೇಡಿಕೆಗೆ ಕೊನೆಗೂ ಯಶಸ್ಸು ಸಿಕ್ಕಿದೆ.

ಕ್ಯಾಲನೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ (ಕೆಪಿಎಸ್) ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪಿಯು ವಿಭಾಗ ಪ್ರಾರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಪಿಯು ಕಾಲೇಜು ಆರಂಭ ಹಲವು ಹೋರಾಟಗಳ ಪ್ರತಿಫಲವಾಗಿದೆ. ಈ ಬಗ್ಗೆ ಪ್ರಜಾವಾಣಿಯಲ್ಲಿ ವರದಿಯೂ ಪ್ರಕಟವಾಗಿತ್ತು. ಹಾಗಾಗಿ 2026–27ನೇ ಶೈಕ್ಷಣಿಕ ವರ್ಷದಿಂದ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.

ಪ್ರಸಕ್ತ ವರ್ಷದಿಂದ ಕ್ಯಾಲನೂರು ಕೆಪಿಎಸ್ ಶಾಲೆಯಲ್ಲಿ ಪಿಯು ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ. ಈ ಶಾಲೆಯಲ್ಲಿ ಸುಸಜ್ಜಿತ ಕಟ್ಟಡ ಮತ್ತು ಪೀಠೋಪಕರಣಗಳಿದ್ದು, ಪ್ರವೇಶಾತಿ ಪ್ರಕ್ರಿಯೆಗಳು ಶೀಘ್ರ ಆರಂಭವಾಗಲಿವೆ. ಈ ಪ್ರಕ್ರಿಯೆಯು ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡಿದಂತಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-18-2016883611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.