ಕೆ.ಆರ್.ಪೇಟೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗ್ರಾಮೀಣ ಮತ್ತು ಪಟ್ಟಣ ಪ್ರದೇಶದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಉತ್ತಮ ಸಾಧನೆ ಮಾಡಿದ್ದು ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಿ ಸರ್ಕಾರಿ ಪಿಯು ಕಾಲೇಜುಗಳನ್ನು ಮುಚ್ಚದಂತೆ ನೋಡಿಕೊಳ್ಳಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸಿ.ಚಲುವಯ್ಯ ಹೇಳಿದರು.

ಪಟ್ಟಣದಲ್ಲಿ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಶನಿವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸರ್ಕಾರಿ ಪಿಯು ಕಾಲೇಜುಗಳಲ್ಲಿ ದಾಖಲಾತಿ ಕೊರತೆಆಗಿ ಮುಚ್ಚುವ ಹಂತ ತಲುಪುತ್ತಿವೆ. ಸಮಾನ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಲ್ಲಬೇಕಾದರೆ ಸರ್ಕಾರಿ ಶಾಲೆ ಮತ್ತು ಕಾಲೇಜುಗಳನ್ನು ಉಳಿಸಬೇಕು. ಕಾಲೇಜು ಉಳೀಸಲು ಸರ್ಕಾರ ಹತ್ತು ಹಲವು ಕ್ರಮಗಳನ್ನು ಕೈಗೊಂಡಿದೆ. ಈ ವರ್ಷದಿಂದ ಪಿಯು ವಿದ್ಯಾರ್ಥಿಗಳಿಗೂ ಉಚಿತ ಪುಸ್ತಕ, ನೋಟ್ ಬುಕ್, ಉಪಾಹಾರ ಯೋಜನೆಗಳನ್ನು ಜಾರಿ ಮಾಡಲು ನಿರ್ಧರಿಸಿದೆ. ಖಾಲಿ ಇರುವ ಹುದ್ದೆಗಳಿಗೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಆದೇಶ ನೀಡಿದೆ. ಸರ್ಕಾರಿ ಕಾಲೇಜಿಗೆ ಸೇರುವ ವಿದ್ಯಾರ್ಥಿಯ ಭವಿಷ್ಯವನ್ನು ಉಜ್ವಲಗೊಳಿಸಲು ನೀಟ್, ಸಿಇಟಿ ಮತ್ತು ಸ್ಪರ್ಧಾತ್ಮಕ ಪರಿಕ್ಷೆಗಳಿಗೆ ತರಬೇತಿ ನೀಡಲು ಕ್ರಮವಹಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಡಿಡಿಪಿಯು ಆಗಿ ಕಾರ್ಯನಿರ್ವಹಿಸಿದ್ದು ಸಂತೃಪ್ತಿ ನೀಡಿದೆ. ಹಲವು ಸುಧಾರಣೆಗಳನ್ನು ಜಾರಿ ಮಾಡಿದ್ದರಿಂದ ಫಲಿತಾಂಶ ಹೆಚ್ಚಳವಾಗಿದೆ. ಈ ಬಾರಿ ರಾಜ್ಯಮಟ್ಟದಲ್ಲಿ ಎರಡೂ ಪರಿಕ್ಷೆಗಳಲ್ಲಿ ಫಲಿತಾಂಶ ಶೇ 94 ದಾಟಿದೆ. ಇದಕ್ಕೆ ಜಿಲ್ಲೆಯ ಎಲ್ಲ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿಯ ಸಹಕಾರವೇ ಕಾರಣ ಎಂದರು.

ಮೈಸೂರು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ನಾಗಮ್ಮ ಸಮಾರಂಭ ಉದ್ಘಾಟಿಸಿ ಮಾತನಾಡಿ, ಚೆಲುವಯ್ಯ ಅವರು ಮಂಡ್ಯ ಜಿಲ್ಲೆಯ ಡಿಡಿಪಿಯು ಆಗಿ ಉತ್ತಮ ಕೆಲಸ ಮಾಡಿದ್ದು, ದ್ವಿತೀಯ ಪಿಯು ಫಲಿತಾಂಶ ಹೆಚ್ಚಳ ಮತ್ತು ಶೈಕ್ಷಣಿಕ ಸುಧಾರಣೆಗೆ ಶ್ರಮಿಸಿದ್ದಾರೆ. ತಮ್ಮ ವೃತ್ತಿಯಲ್ಲಿ, ಬೋಧನಾ ವಿಧಾನದಲ್ಲಿ, ಆಡಳಿತಾತ್ಮಕ ಕ್ಷೇತ್ರದಲ್ಲಿ ಚೆಲುವಾದ ಕೆಲಸಗಳನ್ನು ಮಾಡುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಆಡಳಿತಾತ್ಮಕ ಮತ್ತು ಶೈಕ್ಷಣಿಕವಾಗಿ ಅವರು ಕೈಗೊಂಡ ಕ್ರಮಗಳು ಬೇರೆ ಜಿಲ್ಲೆಗೂ ಮಾದರಿಯಾಗಿವೆ. ಅವರ ಕಾರ್ಯ ವೈಖರಿ ಮೆಚ್ಚಿ ಅರ್ಜಿ ಹಾಕದಿದ್ದರೂ ಸರ್ಕಾರ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-40-515391173

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.