ಸಂತೇಮರಹಳ್ಳಿ: ಈಚೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಮೀಪದ ಕುದೇರು ಗ್ರಾಮದ ಸರ್ಕಾರಿ ಎಂ.ಸಂಗಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ 79 ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾಗಿದ್ದ 142 ವಿದ್ಯಾರ್ಥಿಗಳಲ್ಲಿ 113 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ. 15 ವಿದ್ಯಾರ್ಥಿಗಳು ಅತ್ಯುನ್ನತ, 82 ವಿದ್ಯಾರ್ಥಿಗಳು ಪ್ರಥಮ, 14 ದ್ವಿತೀಯ ಹಾಗೂ 2 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿರುತ್ತಾರೆ.

ಕಲಾ ವಿಭಾಗದಲ್ಲಿ ರಮ್ಯ 575, ವಾಣಿಜ್ಯ ವಿಭಾಗದಲ್ಲಿ ಎನ್.ಕೆ.ಭಾಗ್ಯಲಕ್ಷ್ಮಿ 576, ವಿಜ್ಞಾನ ವಿಭಾಗದಲ್ಲಿ ಕೆ.ಜಿ.ಸಹನಾ 502 ಅಂಕಗಳನ್ನು ಪಡೆದಿರುತ್ತಾರೆ. ಉತ್ತಮ ಫಲಿತಾಂಶ ನೀಡಿದ ಎಲ್ಲ ವಿದ್ಯಾರ್ಥಿಗಳನ್ನು ಹಾಗೂ ಉತ್ತಮ ಫಲಿತಾಂಶ ಬರುವಲ್ಲಿ ಶ್ರಮಿಸಿದ ಉಪನ್ಯಾಸಕರನ್ನು ಕಾಲೇಜಿನ ಪ್ರಾಂಶುಪಾಲ ಎನ್.ಎಂ.ಶಿವಪ್ರಕಾಶ್ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-37-2016192926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.