ಕುಕನೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಸ್ಥಳೀಯ ಕೆಎಲ್ಇ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತಾಲೂಕಿನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ 188 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 181 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 43 ವಿದ್ಯಾರ್ಥಿಗಳು ಅತ್ಯುತ್ತಮ ದರ್ಜೆ, 132 ವಿದ್ಯಾರ್ಥಿಗಳು ಪ್ರಥಮ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಲತಾ ಕಡಿವಾಳ ಶೇ95.33, ವಾಣಿಜ್ಯ ವಿಭಾಗದಲ್ಲಿ ಶಾಂತಾ ಮಲ್ಲಣ್ಣವರ ಶೇ93.83 ಪ್ರತಿಶತ, ವಿಜ್ಞಾನ ವಿಭಾಗದಲ್ಲಿ ರವಿಕುಮಾರ ಹಳ್ಳಿ ಶೇ90.66 ಪಡೆದು ಕಾಲೇಜಿಗೆ ಮೊದಲನೇ ಸ್ಥಾನ ಪಡೆದಿದ್ದಾರೆ.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯ ಕ್ಷರು, ಸದಸ್ಯರು ಹಾಗೂ ಪ್ರಾಚಾರ್ಯ ಅರುಣಕುಮಾರ ಹಿರೇಮಠ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-35-1907320243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.