ಕುಶಾಲನಗರ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪ್ರಾಮಾಣಿಕತೆ, ಧೈರ್ಯ, ನಿಷ್ಠೆ ಮತ್ತು ನಾಯಕತ್ವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಸಂಸ್ಥೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಹೇಳಿದರು.

ಸಮೀಪದ ಕೂಡಿಗೆ ಕೊಡಗು ಸೈನಿಕ ಶಾಲೆಯಲ್ಲಿ ಏರ್ಪಡಿಸಿದ್ದ 2025–26ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿಯ ನಿರ್ಗಮಿತ ಕೆಡೆಟ್ಗಳಿಗೆ ಶಾಲೆಯ ನೆನಪಿನ ಕಾಣಿಕೆಗಳನ್ನು ವಿತರಿಸಿದ ಅವರು ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ತಂಡದ ಕೆಲಸವನ್ನು ಶ್ಲಾಘಿಸಿದರು.

ಶಿಸ್ತು ಮತ್ತು ನಡತೆಯ ಮಹತ್ವವನ್ನು ಒತ್ತಿ ಹೇಳಿದ ಅವರು, ದೈಹಿಕ ಸದೃಢತೆಯನ್ನು ಕಾಯ್ದುಕೊಂಡು, ದುರಭ್ಯಾಸಗಳಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಉಪ ಪ್ರಾಂಶುಪಾಲ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಮಾತನಾಡಿ, ಕೆಡೆಟ್ಗಳ ಎಂಟು ವರ್ಷಗಳ ಶಿಸ್ತುಬದ್ಧ ಜೀವನ, ಕಠಿಣ ತರಬೇತಿ ಮತ್ತು ಶೈಕ್ಷಣಿಕ ಸಾಧನೆಗಳನ್ನು ಮೆಲುಕು ಹಾಕಿದರು. ಈ ಅನುಭವಗಳು ಅವರನ್ನು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಮರ್ಥ ವ್ಯಕ್ತಿಗಳನ್ನಾಗಿ ರೂಪಿಸಿವೆ ಎಂದು ಹೇಳಿದರು.

ಕಾರ್ಯಪ್ಪ ನಿಲಯಕ್ಕೆ ಸಮಗ್ರ ಪ್ರಶಸ್ತಿ: ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಾರ್ಯಪ್ಪ ನಿಲಯ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಈ ಸಾಂಸ್ಕೃತಿಕ ಹಬ್ಬದಲ್ಲಿ ಸೃಜನಶೀಲತೆ ಮತ್ತು ಪ್ರತಿಭೆ ಪ್ರದರ್ಶಿಸಲು ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಸಮೂಹ ಗೀತೆ, ಕಿರುನಾಟಕ ಡಿಜಿಟಲ್ ಕನ್ನಡಿ: ತಂತ್ರಜ್ಞಾನ ಮತ್ತು ನೈತಿಕತೆ, ಜಾನಪದ ನೃತ್ಯ, ನೃತ್ಯ, ಫ್ರೀ-ಸ್ಟೈಲ್ ಸಿನಿಮಾಟಿಕ್ ಶೈಲಿಯಲ್ಲಿ ಎಂಬ ವಿಷಯಗಳ ಕುರಿತು ಸ್ಪರ್ಧೆ ಏರ್ಪಡಿಸಲಾಗಿತ್ತು.

ಎಲ್ಲ ನಿಲಯಗಳ ನಡುವೆ ನಡೆದ ತೀವ್ರ ಪೈಪೋಟಿಯಲ್ಲಿ, ಅತ್ಯುತ್ತಮ ಪ್ರದರ್ಶನ ನೀಡಿದ ಕಾರ್ಯಪ್ಪ ನಿಲಯವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಕಾರ್ಯಕ್ರಮದಲ್ಲಿ ಎಲ್ಲ ನಿಲಯಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲೆಯ 13ನೇ ಬ್ಯಾಚ್ನ 12ನೇ ತರಗತಿಯ ಕೆಡೆಟ್ಗಳಿಗೆ ಬೀಳ್ಕೊಡುಗೆ ನೀಡಲಾಯಿತು. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಸುಬೇದಾರ್ ಮೇಜರ್ ರಾಮ್ ಲಾಲ್, ರೀತಾ ಕುಮಾರಿ, ದಿವ್ಯಾ ಸಿಂಗ್, ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ. ಪ್ರಕಾಶ್ ರಾವ್, ಹಿರಿಯ ಶಿಕ್ಷಕ ವಿಭಿನ್ ಕುಮಾರ್, ಡಾ.ಸಿ.ಎಸ್. ಅನುಪಮಾ, ವಿದುಷಿ ಏಂಜೆಲ್ ರಶ್ಮಿ ಡಿಸೋಜಾ, ಶ್ರೀಮತಿ ಋತು ಎನ್. ರಾಜ್ ಹಾಗೂ ಶಾಲೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎನ್ಸಿಸಿ ಸಿಬ್ಬಂದಿ ಹಾಗೂ ಕೆಡೆಟ್ಗಳು ಉಪಸ್ಥಿತರಿದ್ದರು.

ಶಾಲೆಯ ವಿದ್ಯಾರ್ಥಿ ನಾಯಕ ಹೃದಯ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-51-1392418073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.