ಮಳವಳ್ಳಿ: ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 2025-26ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಶೇ 79ರಷ್ಟು ಫಲಿತಾಂಶ ಬಂದಿದೆ.

ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ 138 ವಿದ್ಯಾರ್ಥಿಗಳಲ್ಲಿ 109 ಮಂದಿ ಉತ್ತೀರ್ಣರಾಗಿದ್ದಾರೆ. 10 ವಿದ್ಯಾರ್ಥಿನಿಯರು ಉನ್ನತ ದರ್ಜೆ, 76 ವಿದ್ಯಾರ್ಥಿಗಳು ಪ್ರಥಮ ದರ್ಜೆ, 17 ಮಂದಿ ದ್ವಿತೀಯ ದರ್ಜೆ ಹಾಗೂ 6 ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ಸಮಾಜವಿಜ್ಞಾನ, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ವಿಷಯಗಳಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ.ಕಲಾ ವಿಭಾಗದಲ್ಲಿ ಕೆ.ಮಮತಾ-551, ಎಂ.ಎನ್.ಚಂದನಾ-544, ಎಂ.ಸಿ.ಮಹಾಲಕ್ಷ್ಮಿ-524, ಮಂಗಳಮ್ಮ-522, ಬಿ.ಪೂರ್ವಿಕಾ-517, ಎಸ್.ಶ್ವೇತಾ-512 ಹಾಗೂ ಪ್ರೀತಿ-511, ವಾಣಿಜ್ಯ ವಿಭಾಗದಲ್ಲಿ ಚೈತ್ರಾ-561, ಡಿ.ಎನ್.ದರ್ಶಿನಿ-527, ವರ್ಷಿಣಿ-520 ಅಂಕ ಪಡೆದಿದ್ದಾರೆ.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ದೊಡ್ಡಯ್ಯ, ಪ್ರಾಂಶುಪಾಲೆ ಪಿ.ಕಾವೇರಿ, ಉಪನ್ಯಾಸಕರು ಹಾಗೂ ಸಿಬ್ಬಂದಿ ಮತ್ತು ಸಮಿತಿಯ ಸದಸ್ಯರು ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-40-2114572446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.