ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.

ವಿಜ್ಞಾನ ವಿಭಾಗದಲ್ಲಿ ಧನುಷ್ ಗುತ್ತಿ 598 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 593 ಅಂಕಗಳನ್ನು ಪಡೆದ ಸರಸ್ವತಿ ಎಂ.ಎಸ್., ಉಪನ್ಯಾಸಕರ ಮಾರ್ಗದರ್ಶನ ಮತ್ತು ಕಾಲೇಜಿನ ನಿರ್ದೇಶಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಯಿತು ಎಂದರು.

592 ಅಂಕಗಳೊಂದಿಗೆ ಸಾಧನೆ ಮಾಡಿರುವ ತಸ್ನೀಮ್ ಎಸ್.ಎಂ., ಕಾಲೇಜಿನ ಪರಿಸರ ಮತ್ತು ಉಪನ್ಯಾಸಕರ ನಿರಂತರ ಸಹಕಾರ ಯಶಸ್ಸಿಗೆ ಕಾರಣ ಎಂದು ತಿಳಿಸಿದರು.

‘ರ್ಯಾಂಕ್ ಬರುವ ನಿರೀಕ್ಷೆ ಇತ್ತು. ಚೆನ್ನಾಗಿ ಅಭ್ಯಾಸ ಮಾಡಿದ್ದೆ. ಕಾಲೇಜಿನಲ್ಲಿ ಒದಗಿಸಿದ್ದ ಪಠ್ಯವಸ್ತುಗಳನ್ನೇ ಕೇಂದ್ರೀಕರಿಸಿ ಅಭ್ಯಾಸ ಮಾಡಿದ್ದೆ. ಅಪ್ಪನಂತೆ ಮೆಕ್ಯಾನಿಕಲ್ ಎಂಜಿನಿಯರ್ ಆಗುವ ಆಸೆ ಇದೆ.

ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದು, ಈ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿದ್ದೇನೆ’ ಎಂದು ಧನುಷ್ ಗುತ್ತಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದನು.

ಈತ ಬೆಂಗಳೂರಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ರಾಜೇಂದ್ರ ಗುತ್ತಿ– ಆಶಾ ಗುತ್ತಿ ದಂಪತಿ ಪುತ್ರ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-1417563667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.