ಮೂಡಿಗೆರೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ ವತಿಯಿಂದ ಸೋಮವಾರ ಸಿಹಿ ಹಂಚಿ ಸ್ವಾಗತಿಸಲಾಯಿತು.

ಪ್ರಾಂಶುಪಾಲ ಬಿ. ಮಹೇಶ್ ಮಾತನಾಡಿ, ‘ಸರ್ಕಾರಿ ಪದವಿಪೂರ್ವ ಕಾಲೇಜು ಯಾವುದೇ ಖಾಸಗೀ ಕಾಲೇಜಿಗೆ ಕಡಿಮೆಯಿಲ್ಲದಂತೆ ಸಾಧನೆ ಮಾಡಿದ್ದು, ಕಳೆದ ಸಾಲಿನಲ್ಲಿ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನಲ್ಲಿ ನುರಿತ ಉಪನ್ಯಾಸಕರಿದ್ದು, ಪ್ರಯೋಗ ಶಾಲೆ ಸೇರಿದಂತೆ ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ. ಪೋಷಕರು ಖಾಸಗೀ ಕಾಲೇಜುಗಳ ವ್ಯಾಮೋಹವನ್ನು ಬಿಟ್ಟು, ಮಕ್ಕಳನ್ನು ಸರ್ಕಾರಿ ಕಾಲೇಜಿಗೆ ಸೇರಿಸಿ ಖರ್ಚಿಲ್ಲದೇ ಸಾಧಕರಾಗಲು ಅವಕಾಶ ಕಲ್ಪಿಸಬೇಕು’ ಎಂದರು.

2026-27ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ, ಸಿಹಿ ಹಂಚಿ ಸ್ವಾಗತಿಸಲಾಯಿತು. ಉಪನ್ಯಾಸಕರಾದ ಸಾದಿಕ್ ಉಲ್ ಬೇಗಮ್, ಆನಂದ್, ಪ್ರಸಾದ್ ಬಕ್ಕಿ, ಆದರ್ಶ್, ರಘು, ದೀಪ್ತಿ, ಶ್ವೇತಾ, ಅರ್ಪಿತಾ, ಸುಮಾ, ಬಿಂದು ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-126-625121475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.