ಮೈಸೂರು: ಇಲ್ಲಿನ ಎಂ.ಎಂ.ಕೆ ಮತ್ತು ಎಸ್.ಡಿ.ಎಂ. ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿನಿಯರ ಪೋಷಕರಿಗೆ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಶೋಭಾ ಎಸ್.ಪಿ. ಮಾತನಾಡಿ, ‘ವಿದ್ಯಾರ್ಥಿಗಳ ಏಳಿಗೆಯಲ್ಲಿ ಶಿಕ್ಷಕ ಹಾಗೂ ಪೋಷಕರಿಬ್ಬರ ಗುರಿ ಒಂದೇ ಆಗಿದ್ದು, ಇವರಿಬ್ಬರ ಪ್ರಾಮಾಣಿಕ ಪರಿಶ್ರಮದಿಂದ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆ ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾರತಿ ಎನ್. ಮಾತನಾಡಿದರು.

ನಿವೃತ್ತ ಪ್ರಾಂಶುಪಾಲರಾದ ನಯನಕುಮಾರಿ, ಜೀವಶಾಸ್ತ್ರದ ವಿಭಾಗದ ನಿವೃತ್ತ ಮುಖ್ಯಸ್ಥೆ ವಿಜಯಶ್ರೀ ಜೆ.ಎಸ್. ಅವರಿಗೆ ಧರ್ಮಸ್ಥಳ ಮಂಜುನಾಥೇಶ್ವರ ಶೈಕ್ಷಣಿಕ ಸಂಸ್ಥೆ ಆಡಳಿತ ಮಂಡಳಿಯಿಂದ ಬಂಗಾರದ ಉಂಗುರ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಜಿಲ್ಲೆಗೆ 4ನೇ ಸ್ಥಾನವನ್ನು ಪಡೆದ ವಿದ್ಯಾರ್ಥಿನಿಯಾದ ಚಿರಸ್ವಿ ಅವರಿಗೆ ಕೈಗಡಿಯಾರವನ್ನು ನೀಡಿ ಸನ್ಮಾನಿಸಲಾಯಿತು.

ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ನೀಡಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಆಶಾ ಎನ್.ಎಸ್. ಮತ್ತು ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಬಿ.ಟಿ.ನಂದಿನಿ, ಭೌತಶಾಸ್ತ್ರ ಉಪನ್ಯಾಸಕಿ ಲತಾ ಎಸ್, ಮಾನಸ ಎಸ್.ಎಸ್, ಪುಷ್ಪ ಬಿ, ಶ್ವೇತ, ಪ್ರತಿಮಾ ಟಿ. ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-39-875679340

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.