ಮೈಸೂರು: ರಾಜ್ಯ ಸರ್ಕಾರವು ಜಿಲ್ಲೆಯ ಎರಡು ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ (ಪಿಯು) ಕಾಲೇಜುಗಳಾಗಿ ಉನ್ನತೀಕರಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ, ಹೆಚ್ಚುವರಿಯಾಗಿ ಎರಡು ಪಿಯು ಕಾಲೇಜುಗಳು ಸೇರ್ಪಡೆಯಾದಂತಾಗಿದೆ.

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಸಾಲುಂಡಿ ಹಾಗೂ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಈ ‘ಮೇಲ್ದರ್ಜೆಯ ಗ್ಯಾರಂಟಿ’ ದೊರೆತಿದೆ. ಇಲ್ಲಿಗೆ ಪ್ರಥಮ ಪಿಯುಗೆ ದಾಖಲಾತಿ ಮಾಡಿಕೊಳ್ಳಲಾಗುವುದು. ಇದರೊಂದಿಗೆ, ಗ್ರಾಮೀಣ ಶಿಕ್ಷಣ ವ್ಯವಸ್ಥೆ ಬಲಪಡಿಸುವ ಕೆಲಸವನ್ನು ಶಾಲಾ ಶಿಕ್ಷಣ ಇಲಾಖೆಯ(ಪಿಯು) ಮೂಲಕ ಮಾಡಲಾಗುತ್ತಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಗಳ, ಎಸ್ಎಸ್ಎಲ್ಸಿ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳಬಹುದಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದರು. ಇದನ್ನು ಈಗ ಅನುಷ್ಠಾನಕ್ಕೆ ತರಲಾಗಿದೆ. ರಾಜ್ಯದ ಒಟ್ಟು 23 ಪ್ರೌಢಶಾಲೆಗಳು ಪಿಯು ಕಾಲೇಜುಗಳಾಗಿ ಮೇಲ್ದರ್ಜೆಗೇರಿದ್ದು, ಅವುಗಳಲ್ಲಿ ಮೈಸೂರು ಜಿಲ್ಲೆಯ ಎರಡು ಪ್ರೌಢಶಾಲೆಗಳು ಸೇರಿವೆ.

ಜಿಲ್ಲೆಯಲ್ಲಿ ಈವರೆಗೆ 272 ಪಿಯು ಕಾಲೇಜುಗಳಿದ್ದವು. ಹೊಸ ಕಾಲೇಜುಗಳೊಂದಿಗೆ ಈ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

ಕಾಮರ್ಸ್ ಸಂಯೋಜನೆ: ಪ್ರಸಕ್ತ 2026–27ನೇ ಸಾಲಿನಿಂದಲೇ ಈ ಪಿಯು ಕಾಲೇಜುಗಳಲ್ಲಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಇಬಿಎಸಿಎಸ್ (ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಗಣಿತ ವಿಜ್ಞಾನ) ಸಂಯೋಜನೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕಾಲೇಜುಗಳಿಗೆ ‘ಸಂಕೇತ ಸಂಖ್ಯೆ’ಯನ್ನೂ ನೀಡಲಾಗಿದೆ.

ಈ ಕಾಲೇಜುಗಳಲ್ಲಿ ಬೋಧನಾ ಪ್ರಕ್ರಿಯೆಗೆ ಅನುಕೂಲ ಆಗುವಂತೆ, ಜಿಲ್ಲೆಯ ಇತರ ಕಡೆಗಳಲ್ಲಿ ಕಡಿಮೆ ಕಾರ್ಯಭಾರವಿರುವ ಉಪನ್ಯಾಸಕರನ್ನು ನಿಯಮಾನುಸಾರ ಈ ಕಾಲೇಜುಗಳಿಗೆ ನಿಯೋಜಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸಮೀಪದಲ್ಲೇ ಪಿಯು ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಇದರಿಂದಾಗಿ, ಆ ಭಾಗದ ವಿದ್ಯಾರ್ಥಿಗಳು ದೂರದ ನಗರಗಳಿಗೆ ಹೋಗುವುದು ತಪ್ಪುತ್ತದೆ. ಆಯಾ ಪ್ರೌಢಶಾಲೆಯಲ್ಲಿ ಕಲಿತವರು, ಅಲ್ಲಿಯೇ ಪಿಯು ಕಾಲೇಜು ಶಿಕ್ಷಣ ಪಡೆಯುವುದಕ್ಕೂ ಅವಕಾಶವಿದೆ. ಆದರೆ, ಇಲ್ಲಿ ಸದ್ಯಕ್ಕೆ ಕಲಾ ಹಾಗೂ ವಿಜ್ಞಾನ ವಿಭಾಗದ ಅವಕಾಶ ಇಲ್ಲ. ಜೊತೆಗೆ ಈ ಪ್ರೌಢಶಾಲೆಗಳಲ್ಲಿ, ಪಿಯು ಶಿಕ್ಷಣಕ್ಕೆ ತಕ್ಕಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.

ಉನ್ನತೀಕರಣಕ್ಕೆ ಆಯ್ಕೆ ಮಾಡುವ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕನಿಷ್ಠ 40 ವಿದ್ಯಾರ್ಥಿಗಳು ಕಲಿಯುತ್ತಿರಬೇಕು ಹಾಗೂ 15 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳು ಇರಬಾರದು ಎಂದು ಸರ್ಕಾರ ನಿಯಮ ರೂಪಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-39-1382745227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.