ನವಲಗುಂದ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದೇ ಇಲಾಖೆಯಲ್ಲಿ ಕಾಯಂ ನೌಕರರಾಗಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ಸ್ಥಳೀಯ ಸಂಸ್ಥೆ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರ ಮಕ್ಕಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ. ಪೊಲೀಸ್ ಇಲಾಖೆಯ ನೌಕರರ ಮಕ್ಕಳು ಸಹ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ, ಕೆಜಿಐಡಿ ನಂಬರ್, ಇಲಾಖೆಯ ಸೇವಾ ದಾಖಲೆ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಥವಾ ತಾಲ್ಲೂಕು ಶಾಖೆ ಅಧ್ಯಕ್ಷರ ಸಹಿ ಮತ್ತು ಮುದ್ರೆಯೊಂದಿಗೆ ಮೇ 25ರ ಒಳಗೆ ವೆಬ್ಸೈಟ್ (https://powermedia.info) ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಎಲ್.ವೈ. ರಾಯಪ್ಪನವರ (99027 68066), ಎನ್.ವೈ.ಕಳಸಾಪುರ (91482 80813) ಅವರನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ. ಡಿ. ರಂಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-1314905215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.