ಕನಕಗಿರಿ: ಸಮೀಪದ ನವಲಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ತೋರುವ ಮೂಲಕ ತಾಲ್ಲೂಕಿಗೆ ಪ್ರಥಮ ಸ್ಥಾನ ಬಂದಿದ್ದು, ಶೇ 93.15ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 48 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. 15 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 31 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ 2 ತೃತೀಯ ವರ್ಗದಲ್ಲಿ ಉತ್ತೀರ್ಣಗೊಂಡಿದ್ದಾರೆ.

ವಿದ್ಯಾರ್ಥಿನಿ ಪವಿತ್ರಾ 584(ಶೇ 97.33) ಅಂಕ ಪಡೆದು ಕಾಲೇಜು ಹಾಗೂ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇತಿಹಾಸ, ಸಮಾಜಶಾಸ್ತ್ರ ಹಾಗೂ ರಾಜ್ಯಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿದ್ದಾರೆ.

ಜಯಲಕ್ಷ್ಮಿ 566 (ಶೇ 94.33) ಅಂಕ ಪಡೆದು ಕಾಲೇಜಿಗೆ ದ್ವಿತೀಯ ಹಾಗೂ ಹುಲಿಗೆಮ್ಮ 565 (ಶೇ 94.16) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ದೇವಮ್ಮ (ಶೇ 93.5), ಅಮರ( ಶೇ 93.5), ಲಕ್ಷ್ಮೀ (ಶೇ 91.16), ಶಿವಮ್ಮ (ಶೇ 91.16), ಶಿವಲೀಲಾ (ಶೇ 90.33) ಅವರು ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಶೇ 100 ರಷ್ಟು ಸಾಧನೆ ಮಾಡಿದ್ದಾರೆ. 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸ್ ಆಗಿದ್ದಾರೆ. ಅಜಯಕುಮಾರ 569 (ಶೇ 94.83) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ, ರೇಣುಕಾ 559 (ಶೇ 93.16) ಅಂಕ ಪಡೆದು ದ್ವಿತೀಯ ಸ್ಥಾನ, ಕಾವೇರಿ 537 (ಶೇ 89.5)ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ರಾಧಿಕಾ ವಾಣಿಜ್ಯ ವಿಭಾಗದ ವ್ಯವಹಾರ ಅಧ್ಯಯನ ವಿಷಯದಲ್ಲಿ ಶೇ 100 ಅಂಕ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಕಾಲೇಜಿನ ಫಲಿತಾಂಶ ತಾಲ್ಲೂಕಿನಲ್ಲಿ ಗಮನ ಸೆಳೆದಿದ್ದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ನೀಡಿದ ಪ್ರಾಂಶುಪಾಲರಿಗೆ, ಉಪನ್ಯಾಸಕರಿಗೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಕಲ್ಲೂರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-35-2108181415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.