ಪಿರಿಯಾಪಟ್ಟಣ: ತಾಲ್ಲೂಕಿನ ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಈ ಬಾರಿ ಫಲಿತಾಂಶವನ್ನು ಉತ್ತಮ ಪಡಿಸಿಕೊಂಡಿವೆ.

ಪಟ್ಟಣದ ಅಕ್ಷರ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 3 ನೇ ಬಾರಿಗೆ ತಾಲ್ಲೂಕಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಮೊದಲ ನಾಲ್ಕು ಸ್ಥಾನಗಳನ್ನು ಪಡೆದಿದೆ.

ವಿಜ್ಞಾನ ವಿಭಾಗದಲ್ಲಿ 98 ವಿದ್ಯಾರ್ಥಿಗಳಿಗೆ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಮಾರಿ ನಿರ್ಸಲ ಎಂಬ ವಿದ್ಯಾರ್ಥಿ 587 (ಶೇ 97.83) ಅಂಕಗಳನ್ನು ಪಡೆದುಕೊಂಡು ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು, ಪಿ.ಎಚ್.ಅನುಶ್ರೀ 583 (ಶೇ 97) ಅಂಕ ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನವನ್ನು, ಪಿ.ನಕ್ಷತ್ರಗೌಡ 581(ಶೇ.97) ಅಂಕ ಪಡೆದು ತಾಲ್ಲೂಕಿಗೆ ತೃತೀಯ ಸ್ಥಾನ ಹಾಗೂ ಡಿ.ವಿಲಾಸ್ ಗೌಡ 577 ಅಂಕ ಪಡೆದು ತಾಲ್ಲೂಕಿಗೆ ನಾಲ್ಕನೆಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದ 63 ವಿದ್ಯಾರ್ಥಿಗಳಲ್ಲಿ 63 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಕೆ.ಅಮೂಲ್ಯ 585 ( ಶೇ 97.5) ಅಂಕ ಪಡೆದು, ತಾಲ್ಲೂಕಿಗೆ ಮೂರನೇಯ ಸ್ಥಾನ ಪಡೆದಿದ್ದಾರೆ. ಜಿ.ಅಮೂಲ್ಯ 584 (ಶೇ 97.4) ಎಚ್.ಧನುಶ್ರಿ 584 (ಶೇ 97.4) ಎಲ್.ದೀಪ್ತಿ 582 (ಶೇ 97) ಅಂಕ ಪಡೆದು ಕೀರ್ತಿಯನ್ನು ತಂದಿದ್ದಾರೆ. ಎಸ್ಕೆಎಸ್ಟಿ ಮಹಿಳಾ ಪದವಿಪೂರ್ವ ಕಾಲೇಜಿಗೆ ಶೇ 71.43 ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-38-469292597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.