ರಾಯಚೂರು: ಪ್ಯಾರಾ ಮೆಡಿಕಲ್ ಕೋರ್ಸ್ಗಳ ಪ್ರವೇಶಕ್ಕೆ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ಪೂರೈಸುವುದನ್ನು ಕಡ್ಡಾಯಗೊಳಿಸಿರುವ ಆದೇಶ ಹಿಂಪಡೆಯಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಆಗ್ರಹಿಸಿದೆ.

ಅರೆ ವೈದ್ಯಕೀಯ ಕೋರ್ಸ್ಗಳಿಗೆ ದಾಖಲಾಗಲು ವಿಜ್ಞಾನ ವಿಷಯದಲ್ಲಿ ಪಿಯುಸಿ ಪೂರ್ಣಗೊಳಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಿರುವ ಅಲೈಡ್ ಮತ್ತು ಹೆಲ್ತ್ ಕೇರ್ ರಾಷ್ಟ್ರೀಯ ಆಯೋಗದ ನಿರ್ಧಾರವನ್ನು ಸಂಘಟನೆ ವಿರೋಧಿಸಿದೆ.

ಇದುವರೆಗೂ ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರೆ ವೈದ್ಯಕೀಯ (ಡಿಪ್ಲೊಮಾ) ಕೋರ್ಸ್ಗಳಿಗೆ ಪ್ರವೇಶ ಪಡೆಯುತ್ತಿದ್ದರು. ಎಸ್ಎಸ್ಎಲ್ಸಿ ತೇರ್ಗಡೆಯಾದ ನಂತರ ಪ್ರಯೋಗಾಲಯ ತಂತ್ರಜ್ಞಾನ, ವೈದ್ಯಕೀಯ ಪ್ರತಿಫಲನ, ಶಸ್ತ್ರಚಿಕಿತ್ಸಾ ತಂತ್ರಜ್ಞಾನ, ಡಯಾಲಿಸಿಸ್, ಆರೋಗ್ಯ ಸಹಾಯಕರು, ಫಿಸಿಯೋಥೆರಪಿ, ಕಣ್ಣಿನ ತಂತ್ರಜ್ಞಾನ, ಶರೀರಶಾಸ್ತ್ರ, ಅಂಗರಚನಾ ಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ, ಸಮುದಾಯ ಔಷಧ, ರೋಗಶಾಸ್ತ್ರ, ವಿಧಿವಿಜ್ಞಾನ ಔಷಧ, ಜೀವರಸಾಯನ ವಿಜ್ಞಾನ ಸೇರಿದಂತೆ ವಿವಿಧ ಕೋರ್ಸ್ಗಳನ್ನು ಪೂರೈಸಿ, ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಉದ್ಯೋಗದ ಅವಕಾಶ ಪಡೆಯುತ್ತಿದ್ದರು. ಬಡ ವಿದ್ಯಾರ್ಥಿಗಳಿಗೆ ಇಂತಹ ಕೋರ್ಸ್ಗಳನ್ನು ಓದುವುದೇ ಅಸಾಧ್ಯವಾಗುತ್ತದೆ. ಇಂಥ ಕೋರ್ಸ್ ಮುಗಿಸಿ ಉದ್ಯೋಗ ಪಡೆಯುವ ನಿರೀಕ್ಷೆಯಲ್ಲಿದ್ದ ಹಿಂದುಳಿದ ಆರ್ಥಿಕತೆಯ ಹಿನ್ನೆಲೆಯಿಂದ ಬರುವವರಿಗೆ ಇದ್ದ ಒಂದು ಅವಕಾಶ ಕಿತ್ತುಕೊಂಡಂತಾಗುತ್ತದೆ ಎಂದು ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ವಿನೋದಕುಮಾರ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-32-1564935103

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.