ರಾಮನಗರ: ‘ಯಾವುದೇ ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮ ಅಗತ್ಯ. ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸರಿಯಾದ ಗುರಿಯೊಂದಿಗೆ ಶ್ರಮಪಡಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕ ಎಂ. ಮರಿಸ್ವಾಮಿ ಸಲಹೆ ನೀಡಿದರು.

ನಗರದ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಪಿಯು ವಿಜ್ಞಾನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ಮೂಲಕ ತಂದೆ–ತಾಯಿ ಹಾಗೂ ತಾವು ಓದಿದ ಕಾಲೇಜಿಗೆ ಕೀರ್ತಿ ತರಬೇಕು’ ಎಂದರು.

ಗೌಸಿಯಾ ತಾಂತ್ರಿಕ ಮತ್ತು ಎಂಜಿನಿಯರಿಂಗ್ ಟ್ರಸ್ಟ್ನ ಗೌರವ ಕಾರ್ಯದರ್ಶಿ ಉಮರ್ ಇಸ್ಮಾಯಿಲ್ ಖಾನ್ ಮಾತನಾಡಿ, ‘ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ನೀವು ಶ್ರಮಪಟ್ಟಿರಬಹುದು, ಅದೃಷ್ಟವೂ ಇರಬಹುದು. ಆದರೆ ಅತಿಯಾದ ಆತ್ಮವಿಶ್ವಾಸ ನಿಮ್ಮನ್ನು ಹಾಳು ಮಾಡುತ್ತದೆ’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಸನ್ಮಾನಿಸಲಾಯಿತು. ಗೌಸಿಯಾ ತಾಂತ್ರಿಕ ಮತ್ತು ಎಂಜಿನಿಯರಿಂಗ್ ಟ್ರಸ್ಟ್ ಅಧ್ಯಕ್ಷ ನವಾಜ್ ಎ. ಷರೀಫ್, ಗೌಸಿಯಾ ಪಿಯು ಕಾಲೇಜು ಪ್ರಾಂಶುಪಾಲ ಪ್ರೊ. ನಜ್ರುಲ್ಲಾ ಖಾನ್, ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಕುಮಾರ್, ಆಡಳಿತಾಧಿಕಾರಿ ಏಜಾಜ್ ಅಹಮದ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-14-103306982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.