ಸಂಡೂರು: ಪಟ್ಟಣದ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಎಸ್.ವಿ. ನಾನಾವಟೆ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದ್ದು, ಕಾಲೇಜಿನ ಎನ್. ಸಂಜನಾ ವಾಣಿಜ್ಯ ವಿಭಾಗದಲ್ಲಿ ಶೇ 99.33 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 5ನೇ, ಜಿಲ್ಲೆಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಚ್. ಸುದೀಪ್ ಶೇ 98.83 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ, ಜಿಲ್ಲೆಗೆ ದ್ವಿತಿಯ ರ್ಯಾಂಕ್ ಪಡೆದಿದ್ದಾರೆ.

ವಾಣಿಜ್ಯ ವಿಭಾಗ: ಪರೀಕ್ಷೆಗೆ ಕುಳಿತ 87 ವಿದ್ಯಾರ್ಥಿಗಳಲ್ಲಿ 30 ಮಂದಿ ಉತ್ಕೃಷ್ಟ, 47 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 8 ವಿದ್ಯಾರ್ಥಿಗಳು ದ್ವಿತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎನ್. ಸಂಜನಾ ಶೇ 99.33, ಡಿ.ಎಂ. ಶ್ರೇಯಾ ಶೇ 98 ಹಾಗೂ ಅಲ್ಫಿಯಾ ಕೆ. ಶೇ 97 ಅಂಕಗಳನ್ನು ಗಳಿಸಿ ಕ್ರಮವಾಗಿ ಶಾಲೆಗೆ ಪ್ರಥಮ, ದ್ವಿತಿಯ ಹಾಗೂ ತೃತಿಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗ: ಪರೀಕ್ಷೆಗೆ ಕುಳಿತ 177 ವಿದ್ಯಾರ್ಥಿಗಳಲ್ಲಿ 83 ವಿದ್ಯಾರ್ಥಿಗಳು ಉತ್ಕೃಷ್ಟ, 85 ಮಂದಿ ಪ್ರಥಮ ದರ್ಜೆ ಹಾಗೂ 7 ವಿದ್ಯಾರ್ಥಿಗಳು ದ್ವಿತಿಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಎಚ್. ಸುದೀಪ್ ಶೇ 98.83, ಅಖಿಲ್ ಕುಮಾರ್ ಶೇ 97 ಹಾಗೂ ಕಿರಣ್ ಎಸ್ ಶೇ 96.33 ಅಂಕಗಳನ್ನು ಗಳಿಸಿ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತಿಯ ಹಾಗೂ ತೃತಿಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶ್ರೀಶೈಲೇಶ್ವ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಕಾರ್ಯದರ್ಶಿ ಚಿದಂಬರ್.ಎಸ್. ನಾನಾವಟೆ, ಆಡಳಿತಾಧಿಕಾರಿ ಕುಮಾರ್ ಎಸ್ ನಾನಾವಟೆ, ಪ್ರಾಚಾರ್ಯರು, ಉಪನ್ಯಾಸಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-25-1530170736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.