ಶಿಡ್ಲಘಟ್ಟ: ಶಿಡ್ಲಘಟ್ಟ–ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಪಿಯು ಕಾಲೇಜಿನಲ್ಲಿ ಸ್ವಸ್ತಿ–2026 ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.

ಬಿಜಿಎಸ್ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್. ಶಿವರಾಮರೆಡ್ಡಿ ಮಾತನಾಡಿ, ‘ಹದಿಹರೆಯದ ಮಕ್ಕಳ ಮನಸ್ಸು ಎಲ್ಲವನ್ನೂ ಬಯಸುತ್ತದೆ. ಎಲ್ಲವನ್ನೂ ಅನುಭವಿಸುವ ಹಾಗೂ ಪಡೆದುಕೊಳ್ಳುವ ತವಕವಿರುತ್ತದೆ. ಆದರೆ, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಪೋಷಕರು ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದು ಹೇಳಿದರು.

13 ರಿಂದ 14ರ ವಯಸ್ಸಿನವರೆಗೆ ಮಕ್ಕಳನ್ನು ಹತೋಟಿಯಲ್ಲಿಡುವ ಕೆಲಸ ಪೋಷಕರಿಂದಾಗಬೇಕು. ಮನುಷ್ಯನ ದೊಡ್ಡ ಶತ್ರು ಅವನ ಸೋಮಾರಿತನ ಎಂದರು.

ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಕೆ. ಮಹದೇವ್, ಹಿರಿಯ ವಿದ್ಯಾರ್ಥಿಗಳಾದ ಡಾ.ಅರುಣ್.ಟಿ.ವಿ, ಆರ್.ಅನುಷಾ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-16-402129602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.