ಶಿವಮೊಗ್ಗ: ‘ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣ ನೀಡುವ ಉದ್ದೇಶದಿಂದ ಗಂಗೋತ್ರಿ ಸ್ವತಂತ್ರ ಪದವಿಪೂರ್ವ ಕಾಲೇಜನ್ನು ಅಭಿವೃದ್ಧಿಪಡಿಸಲಾಗಿದೆ’ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

‘ಬಿ.ಕಾಂ ಮತ್ತು ವಿಜ್ಞಾನ ವಿಭಾಗದ ಪಿಯು ಶಿಕ್ಷಣದೊಂದಿಗೆ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ನೀಟ್ ಮತ್ತು ಜೆಇಇಗೆ ವಿಶೇಷ ತರಬೇತಿ ನೀಡಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜುಲೈ ಮೊದಲ ವಾರದಿಂದ 10 ತಿಂಗಳು ನೀಟ್ ಹಾಗೂ ಜೆಇಇ ಕೋಚಿಂಗ್ ಆರಂಭವಾಗಲಿದ್ದು, ರಾಜಸ್ಥಾನ, ಮಹಾರಾಷ್ಟ್ರ, ಇಂಧೋರ್ ಮತ್ತು ಕೇರಳದ ಐಐಟಿ ನುರಿತ ಹಿರಿಯ ಉಪನ್ಯಾಸಕರು ತರಬೇತಿ ನೀಡಲಿದ್ದಾರೆ’ ಎಂದರು.

‘ಕಾಲೇಜಿನಲ್ಲಿ ಡಿಜಿಟಲ್ ಬೋರ್ಡ್, ಹವಾನಿಯಂತ್ರಿತ ತರಗತಿ ಕೊಠಡಿ, ಸಚಿತ್ರ ಅಧ್ಯಯನ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಉತ್ತಮ ಓದು ವಾತಾವರಣ ನಿರ್ಮಿಸಲಾಗಿದೆ’ ಎಂದು ಹೇಳಿದರು.

‘ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ಶುಲ್ಕದಲ್ಲಿ ಪ್ರವೇಶ ನೀಡಲಾಗುತ್ತಿದೆ, ತರಬೇತಿಯಲ್ಲಿ ವಾರದ, ತಿಂಗಳ ಹಾಗೂ ಅಂತಿಮ ಮಾದರಿ ಪರೀಕ್ಷೆಗಳನ್ನು ನಡೆಸಲಾಗುವುದು. ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆಗಳನ್ನು ಎದುರಿಸಲು ಅಗತ್ಯ ಮನೋಸ್ಥೈರ್ಯ ಮತ್ತು ಸ್ಪರ್ಧಾತ್ಮಕ ಸಿದ್ಧತೆಯನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗುವುದು’ ಎಂದು ವಿವರಿಸಿದರು.

ಪ್ರಾಂಶುಪಾಲ ರೇಣುಕಾರಾಧ್ಯ, ಸಂಸ್ಥೆಯ ಖಜಾಂಚಿ ದಿನೇಶ್ ಪಟೇಲ್, ನಿರ್ದೇಶಕ ಸುಬ್ರಮಣ್ಯಸ್ವಾಮಿ, ಕಾರ್ಯದರ್ಶಿ ಜಗದೀಶ, ಆಡಳಿತಾಧಿಕಾರಿ ರೂಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-42-515984593

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.