ಸಿಂಧನೂರು: ನಗರದ ಎವಿಎಸ್ ಬ್ರಿಲಿಯಂಟ್ ಪಿಯು ಕಾಲೇಜು ವಿಜ್ಞಾನ ವಿಭಾಗದಲ್ಲಿ ಶೇ 97.66 ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಕಾಲೇಜಿನ ಕಾರ್ಯದರ್ಶಿ ಆರ್.ವೆಂಕಟೇಶ್ವರಲು ತಿಳಿಸಿದ್ದಾರೆ.

ಶುಕ್ರವಾರ ಹೇಳಿಕೆ ನೀಡಿರುವ ಅವರು, ಒಟ್ಟು 169 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 167 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಇದರಲ್ಲಿ 7 ವಿದ್ಯಾರ್ಥಿಗಳು ಶೇ 95 ರಷ್ಟು ಅಂಕ ಗಳಿಸಿದ್ದಾರೆ. 27 ವಿದ್ಯಾರ್ಥಿಗಳು ಶೇ 90 ರಷ್ಟು, 66 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 94 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ನಾಗಮಣಿ ಶೇ 97.66 ಅಂಕ ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ, ಸೃಷ್ಟಿ (ಶೇ 95.5) ದ್ವಿತೀಯ ಸ್ಥಾನ ಹಾಗೂ ಗಾಯತ್ರಿ (ಶೇ 95.33) ತೃತೀಯ ಸ್ಥಾನ ಗಳಿಸಿದ್ದಾರೆ. ಕನ್ನಡದಲ್ಲಿ 100ಕ್ಕೆ 100 ಅಂಕವನ್ನು ಹತ್ತು ವಿದ್ಯಾರ್ಥಿಗಳು ಪಡೆದುಕೊಂಡು ಉತ್ತಮ ಸಾಧನೆ ಮಾಡಿದ್ದಾರೆ ಎಂದು ವಿವರಿಸಿದ್ದಾರೆ.

ಗಣಿತದಲ್ಲಿ 5 ಜನ ವಿದ್ಯಾರ್ಥಿಗಳು, ಗಣಕ ವಿಜ್ಞಾನದಲ್ಲಿ ಒಬ್ಬ ವಿದ್ಯಾರ್ಥಿ 100 ಕ್ಕೆ 100 ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಸಿ. ಅಂಕಯ್ಯ, ಕಾಲೇಜಿನ ಕಾರ್ಯದರ್ಶಿ ಆರ್. ವೆಂಕಟೇಶ್ವರಲು ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-32-1834546809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.