ಸಿರಿಗೆರೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ಉಚಿತವಾಗಿ ಪಿಯುಸಿ ಶಿಕ್ಷಣ ನೀಡಲು ತರಳಬಾಳು ಮಠವು ತರಳಬಾಳು ಪ್ರತಿಭಾ ಪುರಸ್ಕಾರ ಯೋಜನೆಯನ್ನು ರೂಪಿಸಿದೆ. ಅದಕ್ಕಾಗಿ ಹಲವು ದಾನಿಗಳು ಮಠದಲ್ಲಿ ಸ್ಥಾಪಿಸಿರುವ ದತ್ತಿ ನಿಧಿಯಲ್ಲಿ ಬರುವ ಆದಾಯವನ್ನು ಬಳಸಿಕೊಳ್ಳಲಾಗುವುದು.

ಉಚಿತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಏಪ್ರಿಲ್ 27ರಂದು ಬೆಳಿಗ್ಗೆ 11ಕ್ಕೆ ಸಿರಿಗೆರೆಯ ಎಂ.ಬಿ.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಲಿಖಿತ ಪರೀಕ್ಷೆ ಬರೆಯಬೇಕು. ಲಿಖಿತ ಪರೀಕ್ಷೆ ತೆಗೆದುಕೊಳ್ಳಲು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕಗಳನ್ನು ತೆಗೆದುಕೊಂಡಿರಬೇಕು.

ವಿದ್ಯಾರ್ಥಿಗಳು ಯಾವುದೇ ಜಿಲ್ಲೆಯವರಾಗಿರಬಹುದು. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳೂ ಪರೀಕ್ಷೆ ತೆಗೆದುಕೊಳ್ಳಲು ಅರ್ಹರು. ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕವನ್ನು ಮಠದಿಂದ ಭರಿಸಲಾಗುವುದಲ್ಲದೇ, ಉಚಿತ ಹಾಸ್ಟೆಲ್ ಸೌಲಭ್ಯ ಸಹ ನೀಡಲಾಗುವುದು.

ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 26 ಕೊನೆಯ ದಿನ.

ಹೆಚ್ಚಿನ ವಿವರಗಳಿಗೆ: ಎ.ಬಿ. ಮಂಜುನಾಥ್, ಪ್ರಾಚಾರ್ಯರು, ಎಂ.ಬಿ.ಆರ್. ಪದವಿಪೂರ್ವ ಕಾಲೇಜು, ಸಿರಿಗೆರೆ, ಚಿತ್ರದುರ್ಗ ಮೊ: 99869 85206, 96639 56275, 97387 08051 ಇವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-44-153251345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.