ಸೊರಬ: ‘ವಿದ್ಯಾರ್ಥಿಗಳು ಸತತ ಪರಿಶ್ರಮ, ಆತ್ಮವಿಶ್ವಾಸ, ಶ್ರದ್ಧೆಯೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ’ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಶಂಕರ ಶೇಟ್ ಹೇಳಿದರು.

ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಮಾತನಾಡಿದರು.

‘ರಾಜ್ಯದಲ್ಲಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯೆ ಯಾರೂ ಕದಿಯಲಾಗದ್ದು. ಸಾಧನೆಗೆ ಶಿಕ್ಷಣವೇ ಮೂಲ ಮಂತ್ರವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಕಲಿಕೆಯಲ್ಲಿ ಆಸಕ್ತಿ ತೋರಿ ಮುಂದೆ ಬರುತ್ತಿರುವುದು ಸಂತಸದ ಸಂಗತಿ’ ಎಂದರು.

ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿದರು.

ವಿದ್ಯಾರ್ಥಿಗಳಾದ ತಾಲ್ಲೂಕಿನ ಭಾಗ್ಯಶ್ರೀ ಆನವಟ್ಟಿ (577 ಅಂಕ–ವಿಜ್ಞಾನ ) ಸಂಗೀತ ಆನವಟ್ಟಿ (574–ವಾಣಿಜ್ಯ) ಹಾಗೂ ಕಲಾ ವಿಭಾಗದ ಪ್ರಿಯಾಂಕಾ ಎಸ್. ಆನವಟ್ಟಿ (573), ಜ್ಯೋತಿ ಎಸ್. ನಿಸರಾಣಿ (573) ಅವರನ್ನು ಗೌರವಿಸಲಾಯಿತು.

ಸಮಾಜ ಸೇವಕ ರಾಜು ಹಿರಿಯಾವಲಿ, ಪಾಣಿ ರಾಜಪ್ಪ, ವಿಜೇಂದ್ರಗೌಡ, ಉಮೇಶ್ ಭದ್ರಾಪುರ, ಮಹೇಶ್ ಖಾರ್ವಿ, ಭಾರತಿ ಭಂಡಾರಿ, ಅರ್ಚನಾ, ರಾಘವೇಂದ್ರ, ಸರಸ್ವತಿ ನಾವಡ, ಪುಷ್ಪಾ, ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-42-256058387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.