ತಾಳಿಕೋಟೆ: ಪ್ರತಿ ಸಮಾಜದಲ್ಲೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿರುತ್ತಾರೆ. ಪ್ರತಿಭೆಗಳನ್ನು ಗೌರವಿಸುವುದರಿಂದ ಅವರು ಇನ್ನಷ್ಟು ದೊಡ್ಡ ಸಾಧನೆಗಳನ್ನು ಮಾಡಲು ಪ್ರೇರೇಪಣೆಯಾದರೆ, ಇತರ ವಿದ್ಯಾರ್ಥಿಗಳಲ್ಲೂ ಇಂತಹ ಸಾಧನೆಯ ಕೆಚ್ಚು ಮೂಡಲು ಇದು ನೆರವಾಗುತ್ತದೆ. ಆದ್ದರಿಂದ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದು ಸಜ್ಜನ್ ಗಾಣಿಗರ ಸೇವಾ ಸಂಘದ ಆಡಳಿತ ಮಂಡಳಿ ಸದಸ್ಯ ಕಾಶಿನಾಥ್ ಸಜ್ಜನ ಹೇಳಿದರು.

ಅವರು ಪಟ್ಟಣದಲ್ಲಿ ಸಜ್ಜನ್ ಗಾಣಿಗರ ಸೇವಾ ಸಂಘ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಭಾನುವಾರ ಮಾತನಾಡಿದರು.

ಶಿಕ್ಷಕ ಎಸ್.ಬಿ.ಸಜ್ಜನ ಮಾತನಾಡಿ, ಸಮಾಜದಲ್ಲಿ ಒಗ್ಗಟ್ಟಿದ್ದಾಗ ಮಾತ್ರ ಇಂತಹ ಸತ್ಕಾರ್ಯಗಳು ನಡೆಯುತ್ತವೆ ಎಂದರು.

ಸಮಾಜದ ಅಧ್ಯಕ್ಷ ಪ್ರಕಾಶ್ ಸಜ್ಜನ, ಉಪಾಧ್ಯಕ್ಷ ತಿಪ್ಪಣ್ಣ ಸಜ್ಜನ್, ಶರಣಪ್ಪ ಸಜ್ಜನ, ಬಸವರಾಜ್ ಜಾಲಿಬೆಂಚಿ, ಪ್ರಕಾಶ್ ಅ ಸಜ್ಜನ, ರಾಜು ಸಜ್ಜನ ಇದ್ದರು.

ಜಯಶ್ರೀ ಸಜ್ಜನ್ ಪ್ರಾರ್ಥಿಸಿದರು. ಬಸವರಾಜ್ ಸಜ್ಜನ ವಂದಿಸಿದರು. ಈ ಕಾರ್ಯಕ್ರಮದಲ್ಲಿ ತಾಳಿಕೋಟೆ ಹಾಗೂ ತಾಲ್ಲೂಕಿನ ಸಜ್ಜನ್ ಸಮಾಜದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-26-1474058902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.