ತರೀಕೆರೆ: ಪೋಷಕರು, ಶಿಕ್ಷಕರು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬ ಬೇಕು ಎಂದು ಕರ್ನಾಟಕ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಘಟಕದ ಕಾರ್ಯದರ್ಶಿ ಅಕ್ಲಬ್ ಅಲಿ ಉಡುಪಿ ಹೇಳಿದರು.

ಜಮಾಅತೆ ಇಸ್ಲಾಮಿ ಹಿಂದ್ ತರೀಕೆರೆ ವತಿಯಿಂದ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೀವನದಲ್ಲಿ ಯಶಸ್ಸು ಸಾಧಿಸಲು ಓದಬೇಕು. ಮಕ್ಕಳಿಗೆ ಬೆನ್ನು ತಟ್ಟಿ ಸ್ಫೂರ್ತಿ ತುಂಬುವ ಕೆಲಸ ಶಿಕ್ಷಕರು ಮಾಡಬೇಕು. ತಾಯಿಯ ಗರ್ಭದಿಂದಲೇ ಮಕ್ಕಳಿಗೆ ಶಿಕ್ಷಣ ದೊರೆಯುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕೃತಿ ಮತ್ತು ಚಾರಿತ್ರ್ಯವನ್ನು ಹೇಳಿಕೊಡಬೇಕು. ಪ್ರಾಮಾಣಿಕತೆ ನೇರ ನುಡಿ ಹಾಗೂ ಪರಿಶುದ್ಧವಾದ ಜೀವನವನ್ನು ನಡೆಸುವ ಕಲೆ ಕಲಿಸಬೇಕು ಎಂದು ಅವರು ಹೇಳಿದರು.

ವಿದ್ಯೆಯ ಶಕ್ತಿ ವಿದ್ಯುತ್ ಶಕ್ತಿಗಿಂತ ಹೆಚ್ಚು. ತಾಯಿಗೆ ಮಕ್ಕಳ ಮೇಲೆ ನಂಬಿಕೆ ಇರಬೇಕು. ಶಿಕ್ಷಣದ ಮೂಲಕ ದೇವರನ್ನು ಹುಡುಕುವ ಕಾರ್ಯ ಅಗಬೇಕು. ತಂದೆ ತಾಯಿಗಳ ಆಶೀರ್ವಾದ ಮಕ್ಕಳಿಗೆ ನೆರಳಾಗಬೇಕು ಎಂದು ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆ ಮಕ್ಕಳ ಕಲ್ಯಾಣ ಸಮಿತಿ (ನ್ಯಾಯಪೀಠ) ಅಧ್ಯಕ್ಷರಾದ ತಾಜುದ್ದೀನ್ ಖಾನ್ ಮಾತನಾಡಿ, ತಂದೆ ತಾಯಿ ಮತ್ತು ಶಿಕ್ಷಕರ ಕ್ರಮವೇ ಮಕ್ಕಳ ಯಶಸ್ಸಿಗೆ ಕಾರಣ. ಮಕ್ಕಳ ಮೇಲೆ ಒತ್ತಡ ಹಾಕಬಾರದು. ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಜಮಾಅತೆ ಇಸ್ಲಾಮಿ ಹಿಂದ್ ತರೀಕೆರೆ ಅಧ್ಯಕ್ಷ ಸೈಯದ್ ಇಸ್ಮಾಯಿಲ್, ಕರ್ನಾಟಕ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಘಟಕದ ಕಾರ್ಯದರ್ಶಿ ಹಾಮಿದ್ ಉರ್ಮಿ, ಪುರಸಭೆ ನಾಮನಿರ್ದೇಶನ ಸದಸ್ಯ ಅದಿಲ್ ಪಾಷ, ಜಮಾಅತೆ ಇಸ್ಲಾಮಿ ಹಿಂದ್ ಮುಖಂಡರಾದ ಶೇಖ್ ಜಾವೀದ್, ಸದ್ವಿದ್ಯಾ ಪಬ್ಲಿಕ್ ಶಾಲೆ ಪ್ರಾಂಶುಪಾಲೆ ಹರ್ಷಿಣಿ ಡಿ.ಆರ್., ನರ್ಮದ್ ಉಲ್ಲಾ ಖಾನ್, ಸರ್ಕಾರಿ ಪ.ಪೂ.ಕಾಲೇಜು ಪ್ರಾಂಶುಪಾಲ ಸಿದ್ದಪ್ಪ ಟಕ್ಕಳಿಕೆ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-126-2124967353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.