ತಿಪಟೂರು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯು ಫಲಿತಾಂಶದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಶುಕ್ರವಾರ ಸನ್ಮಾನ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಎಂ.ಡಿ.ಶಿವಕುಮಾರ್ ಮಾತನಾಡಿ, ಉಪನ್ಯಾಸಕರ, ಪೋಷಕರ, ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ 92 ಫಲಿತಾಂಶ ಬಂದಿದೆ. 114 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದರು.

ನಗದು ವಿತರಿಸಿ ಮಾತನಾಡಿದ ಮಂಜುನಾಥ್, ‘ಕಾಲೇಜಿಗೆ, ಪೋಷಕರಿಗೆ ಕೀರ್ತಿ ತಂದಿದ್ದೀರಿ. ಮುಂದೆ ಕೇಂದ್ರ, ರಾಜ್ಯ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆ ಎದುರಿಸಿ ನಾಗರಿಕ ಸೇವೆಗಳಿಗೆ ಆಯ್ಕೆಯಾಗಿ ಸಾಮಾಜಿಕ ಋಣ ತೀರಿಸಿ’ ಎಂದರು.

ಕನ್ನಡದಲ್ಲಿ ಪೂರ್ಣಾಂಕ ಪಡೆದ ಹದಿನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಮಾತನಾಡಿದ ಎಸ್ವಿಪಿ ಕಾಲೇಜು ಪ್ರಾಂಶುಪಾಲ ರೇಣುಕಯ್ಯ, ಕನ್ನಡದಲ್ಲಿ ಪೂರ್ಣಾಂಕ ಪಡೆಯುವುದು ಸುಲಭವಲ್ಲ. ಕನ್ನಡವನ್ನು ಶುದ್ಧವಾಗಿ ಓದುವ, ಬರೆಯುವ, ಮಾತನಾಡುವ ಸಾಮರ್ಥ್ಯ ಗಳಿಸಿಕೊಂಡಲ್ಲಿ ಎಲ್ಲ ವಿಭಾಗಗಳಲ್ಲೂ ಯಶಸ್ವಿಯಾಗುತ್ತಾರೆ ಎಂದರು.

ಉದ್ಯಮಿ ಸಂತೋಷ್ ಓಸ್ವಾಲ್, ಸಮಾಜ ಸೇವಕಿ ಸ್ವರ್ಣಗೌರಮ್ಮ ವಿದ್ಯಾರ್ಥಿಗಳಿಗೆ ಉಡುಗೊರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎಚ್.ಎಸ್.ಮಂಜಪ್ಪ, ಲೋಕೇಶ್, ಉಪನ್ಯಾಸಕಿ ವಸಂತಲಕ್ಷ್ಮಿ, ಷಡಕ್ಷರಿ, ಸಿಬ್ಬಂದಿ, ಪೋಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-1172031515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.