ತುಮಕೂರು: ನಗರದ ವಿಜಯ ಕಾಲೇಜಿನ ಪಿಯು ವಿದ್ಯಾರ್ಥಿಗಳು ಈಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರೋಹಿತ್ ಶೇ 99ರಷ್ಟು ಫಲಿತಾಂಶದ ಜತೆಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹೇಮಂತ್ ಕುಮಾರ್ ಶೇ 98.5, ಪ್ರಜ್ವಲ್, ವರಲಕ್ಷ್ಮಿ ತಲಾ ಶೇ 97.5 ಅಂಕ ಗಳಿಸಿದ್ದಾರೆ.

ಕಾಲೇಜಿನ ಒಟ್ಟು 105ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಶಾಸ್ತ್ರದಲ್ಲಿ 8 ವಿದ್ಯಾರ್ಥಿಗಳು ತಲಾ 100 ಅಂಕ ಪಡೆದಿದ್ದಾರೆ. ಭೌತಶಾಸ್ತ್ರ ಹಾಗೂ ಕನ್ನಡದಲ್ಲಿ ತಲಾ ಮೂವರು 100 ಅಂಕ ಪಡೆದು ಗಮನ ಸೆಳೆದಿದ್ದಾರೆ. ವಿಜಯ ಪಿಯು ಕಾಲೇಜು ಕಾರ್ಯದರ್ಶಿ ಕೆ.ಎಂ.ಪಣೀಶ್ ಕುಮಾರ್, ಕಾಲೇಜು ಆಡಳಿತ ಮಂಡಳಿಯಿಂದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

‘ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ವಿಜಯ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗಕ್ಕಾಗಿ ಉಚಿತವಾಗಿ ಪ್ರವೇಶ ಕಲ್ಪಿಸಲಾಗುವುದು’ ಎಂದು ಪಣೀಶ್ ಕುಮಾರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-496309315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.