ಕಾರವಾರ: ‘ಆತ್ಮಸ್ಥೈರ್ಯ, ನಿರಂತರ ಪರಿಶ್ರಮದಿಂದ ಜಿಲ್ಲೆಯ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಮಾಡಿರುವ ಸಾಧನೆ ಉಳಿದ ಜಿಲ್ಲೆಯವರಿಗೆ ಪ್ರೇರಣೆ ಆಗುವಂತಿದೆ’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತವು ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾ ಘಟಕದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಯಶಸ್ಸು ಸುಲಭಕ್ಕೆ ಸಿಗದು ಎಂಬ ಅರಿವು ಇರಲಿ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದರೂ ಸತತ ಪ್ರಯತ್ನ ಅಗತ್ಯವಿದೆ. ಅದೃಷ್ಟ ನಂಬಿ ಕುಳಿತುಕೊಳ್ಳುವ ಬದಲು ಪ್ರಯತ್ನ ಪಡುವ ಗುಣ ಬೆಳೆಸಿಕೊಳ್ಳಿ’ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹಲವು ವಿದ್ಯಾರ್ಥಿಗಳು, ಸಾಧನೆಗೆ ಪೋಷಕರು, ಶಿಕ್ಷಕರು, ನೀಡಿದ ಬೆಂಬಲವನ್ನು ಸ್ಮರಿಸಿಕೊಂಡರು.

ವಾಣಿಜ್ಯ ವಿಭಾಗದಲ್ಲಿ ಸಾಧನೆ ಮಾಡಿದ ಚಿನ್ಮಯಿ ಶೆಟ್ಟಿ, ಪ್ರಣವ್ ಭಟ್, ಸಂಜನಾ ನಾಯ್ಕ, ಅಕ್ಷಾ ಶ್ರೀನ್, ಅರ್ಪಿತಾ ಹೆಗಡೆ, ಚೈತನ್ಯ ಹೆಗಡೆ, ಭೂಮಿಕಾ ನಾಯಕ, ಮೈಮುನಾ ಅಜೈಬ್, ತೇಜಸ್ ನಾಯ್ಕ, ರಘು ಹೆಗಡೆ, ಶಿಫಾ ಅನಮ್, ಪರ್ವೀನ್ ಇಬ್ರಾಹಿಂ, ಜಾಹ್ನವಿ ಗೌಡ, ಸಾಕ್ಷಿ ನಾಯ್ಕ ಅವರನ್ನು ಅಭಿನಂದಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ, ಪ್ರಾಚಾರ್ಯ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಮನಾಥನ್, ಉಪನ್ಯಾಸಕ ಸಂಘದ ಅಧ್ಯಕ್ಷ ಪ್ರವೀಣ್ ನಾಯಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-20-14888744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.