ವೇಮಗಲ್: ಹೋಬಳಿಯ ಕ್ಯಾಲನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದಲೇ ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜು ಅಧಿಕೃತವಾಗಿ ಆರಂಭಗೊಂಡಿದೆ.

ಕೆಪಿಎಸ್ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪಿಯು ವಿಭಾಗ ಪ್ರಾರಂಭಿಸಲು ಇತ್ತೀಚೆಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಆ ಆದೇಶದ ಹಿನ್ನೆಲೆ ಕಾಲೇಜು ತನ್ನ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ಚುರುಕಿನಿಂದ ಆರಂಭಿಸಿದೆ.

ಸೋಮವಾ ನೂತನ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಪ್ರೊ.ಆನಂದ್ ಭೇಟಿ ನೀಡಿ ಕಾಲೇಜಿನ ಆಡಳಿತಾತ್ಮಕ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒಸಗಿಸುವುದು ಈ ಕಾಲೇಜಿನ ಉದ್ದೇಶ. ನಗರ ಪ್ರದೇಶದ ಕಾಲೇಜುಗಳಿಗೆ ಸಮಾನವಾದ ವಾತಾವರಣವನ್ನು ಇಲ್ಲಿ ಸೃಷ್ಟಿಸಲಾಗುವುದು. ಹಾಗಾಗಿ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಸಿಕೊಳ್ಳಿ ಎಂದು ಕರೆ ನೀಡಿದರು.

ಕೆಪಿಎಸ್ ಪ್ರೌಢಶಾಲಾ ವಿಭಾ ಗದ ಮುಖ್ಯ ಶಿಕ್ಷಕ ಎಸ್.ಆರ್.ರಾಮಲಿಂಗಪ್ಪ ಮಾತನಾಡಿ, ಕ್ಯಾಲನೂರಿನಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಿರುವುದು ಸಂತಸ ತಂದಿದೆ. ಈ ಕಾಲೇಜಿನಲ್ಲಿ ಆಧುನಿಕ ಸೌಲಭ್ಯಗಳಿವೆ. ಗ್ರಂಥಾಲಯ, ಸುಸಜ್ಜಿತ ನೂತನ ಕಟ್ಟಡ ಹಾಗೂ ಸ್ಮಾರ್ಟ್ ಬೋರ್ಡ್ಗಳನ್ನು ಅಳವಡಿಸಲಾಗಿದೆ. ಜೊತೆಗೆ ಬಾಲಕಿಯರಿಗಾಗಿ ‘ಪಿಂಕ್ ರೂಮ್’ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪೋಷಕರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳು ಈ ಕಾಲೇಜಿಗೆ ದಾಖಲು ಮಾಡಬಹುದು ಎಂದರು.

ಪ್ರಕಾಶ್, ಸಂದೇಶ್, ಶ್ರೀರಾಮಪ್ಪ, ಇಂಯ್ತಿಯಾಜ್, ನಯಾಜ್, ನಟರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-18-805387776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.