ವಿಜಯಪುರ: ಸರ್ಕಾರದ ಅನುಮತಿ ಇಲ್ಲದೆ ಪರೀಕ್ಷೆಗಳನ್ನು ನಡೆಸಿ, ವಿದ್ಯಾರ್ಥಿಗಳಿಂದ ಹೆಚ್ಚುವರಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿರುವ ಖಾಸಗಿ ಪದವಿ ಪೂರ್ವ ಕಾಲೇಜುಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದೆ.

ದ್ರಾವಿಡ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್ ಅಜಮನಿ, ಜಿಲ್ಲೆಯಲ್ಲಿರುವ ಕೆಲವು ಖಾಸಗಿ ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳ ನೋಂದಣಿಗಾಗಿ ಪದೇ ಪದೇ ಪರೀಕ್ಷೆಗಳನ್ನು ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಮೇಲೆ ಮಾನಸಿಕ ಒತ್ತಡ ಉಂಟಾಗುತ್ತಿದೆ. ಜೊತೆಗೆ, ಮೆರಿಟ್ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಹಾಗೂ ಪೋಷಕರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಆರೋಪಿಸಿದರು.

ಕಾನೂನು ಬಾಹಿರ ಶೈಕ್ಷಣಿಕ ಚಟುವಟಿಕೆಗಳನ್ನು ತಕ್ಷಣ ಪತ್ತೆಹಚ್ಚಿ, ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಲ್ಲಾ ಖಾಸಗಿ ಕಾಲೇಜುಗಳು ಸರ್ಕಾರದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ತಮ್ಮ ಸಂಸ್ಥೆಗಳಲ್ಲಿ ಫೀ ರೋಸ್ಟರ್ ಅನ್ನು ಸ್ಪಷ್ಟವಾಗಿ ಪ್ರದರ್ಶಿಸಿ, ಹಣ ಪಡೆದು ವಿದ್ಯಾರ್ಥಿಗಳನ್ನು ನೋಂದಣಿ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಫೀ ರಸೀದಿ ನೀಡಬೇಕು. ಇಲ್ಲವಾದಲ್ಲಿ, ಇಂತಹ ಕಾಲೇಜು ಸಂಸ್ಥೆಗಳ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖಂಡರಾದ ಗೌಡಪ್ಪ ಗೌಡ ಬಡಿಗೇರ, ರಾಹುಲ್ ಕಳಸದವರ, ಆಕಾಶ್ ಕುರ್ಣಿ, ಮಂಜುನಾಥ್ ಕಳಸದ, ಅಜಯ, ಅಜಿತ್, ಅರುಣ ಬುರ್ಲಿ, ಹುಲಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-26-1925738840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.