ಯಾದಗಿರಿ: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ 70.76ರಷ್ಟು ಫಲಿತಾಂಶ ದಾಖಲಿಸಿದ್ದಾರೆ.

ಕಲಾ ವಿಭಾಗದಲ್ಲಿ 215 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿ 151 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 44 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 42 ವಿದ್ಯಾರ್ಥಿನಿಯರ ಪೈಕಿ 31 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ.

301 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 19 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 127 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, 57 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿ ಮತ್ತು 10 ವಿದ್ಯಾರ್ಥಿನಿಯರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಲಲಿತಾ ಕೆ. ಶೇ 93 ಅಂಕ, ವಾಣಿಜ್ಯ ವಿಭಾಗದಲ್ಲಿ ನವ್ಯ ಬಿರಾದಾರ ಶೇ 96 ಹಾಗೂ ವಿಜ್ಞಾನ ವಿಭಾಗದಲ್ಲಿ ಪವಿತ್ರಾ ಶೇ 89.83 ಅಂಕಗಳೊಂದಿಗೆ ಕಾಲೇಜಿನ ಟಾಪರ್ ಆಗಿದ್ದಾರೆ.

ಕಲಾ ವಿಭಾಗದಲ್ಲಿ ಭಾಗ್ಯವಂತಿ ಶೇ 88.66, ನಾಗಮ್ಮ 88.83, ಶಕುಂತಲಾ ಎಂ. ಶೇ 89.83, ರಕ್ಷಿತಾ ಶೇ 89.66, ಶಿವ ನಾಗಮ್ಮ ಶೇ 86.5, ಲಕ್ಷ್ಮಿ ಶೇ 85.66, ಮಲ್ಲಮ್ಮ ಶೇ 86, ರೇಣುಕಾ ಶೇ 89.33, ಭಾಗ್ಯಶ್ರೀ ಬಿ. ಶೇ 87.16 ಹಾಗೂ ಭಾಗ್ಯಶ್ರೀ ಡಿ. ಶೇ 89.16 ಅಂಕ ಪಡೆದಿದ್ದಾರೆ.

ವಾಣಿಜ್ಯದಲ್ಲಿ ನಿರ್ಮಲಾ ಶೇ 90 ಹಾಗೂ ಸುನಿತಾ ಶೇ 86.16 ಅಂಕ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ನಮ್ರತಾ ಶೇ 88.33 ಹಾಗೂ ನಾಗವೇಣಿ ಶೇ 85.5 ಅಂಕ ಗಳಿಸಿದ್ದಾರೆ.

ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿರುವುದಕ್ಕೆ ಕಾಲೇಜಿನ ಸುಧಾರಣಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು ಸಂತೋಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-30-1234031630

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.