ಗುರುಮಠಕಲ್: ‘ನಮ್ಮೂರಾದ ಕಂದಕೂರು ಗ್ರಾಮದಲ್ಲೇ ಸರ್ಕಾರಿ ಪಿಯು ಕಾಲೇಜು ಸ್ಥಾಪಿಸಿದರೆ ಮಕ್ಕಳ ಅಭ್ಯಾಸಕ್ಕೆ ಅನುಕೂಲವಾಗುತ್ತದೆ ಎನ್ನುವುದು ನಮ್ಮ ತಂದೆ ದಿ.ನಾಗನಗೌಡ ಕಂದಕೂರ ಅವರ ಕನಸಾಗಿತ್ತು’ ಎಂದು ಶಾಸಕ ಶರಣಗೌಡ ಕಂದಕೂರ ಅವರು ಸ್ಮರಿಸಿಕೊಂಡರು.

ತಾಲ್ಲೂಕಿನ ಕಂದಕೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ನೂತನ ಪದವಿ ಪೂರ್ವ ಕಾಲೇಜಿನ ಸೌಲಭ್ಯಗಳ ಪರಿಶೀಲನೆ ಮತ್ತು ಅಧಿಕಾರಿಗಳೊಡನೆ ಸಭೆಯಲ್ಲಿ ಅವರು ಮಾತನಾಡಿದರು.

‘ನಮ್ಮ ತಂದೆಯವರ ಅವಧಿಯಲ್ಲೇ ಕಾಲೇಜು ಸ್ಥಾಪನೆಗೆ ಸಾಕಷ್ಟು ಪ್ರಯತ್ನಿಸಿದ್ದರು. ನಾನೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸತತ ಮನವಿ ಮಾಡಿ, ಕಾಲೇಜು ಸ್ಥಾಪನೆಯ ಅಗತ್ಯತೆಯನ್ನು ಮನವರಿಕೆ ಮಾಡಿದ್ದೆ. ಈಗ ಬಹುದಿನಗಳ ಕನಸು ನನಸಾಗಿದೆ’ ಎಂದು ಹೇಳಿದರು.

‘ಕಂದಕೂರ ಗ್ರಾಮಕ್ಕೆ ಸರ್ಕಾರ ನೂತನ ಕಾಲೇಜು ಮಂಜೂರು ಮಾಡಿದ್ದು, ಪ್ರಸಕ್ತ ಸಾಲಿನಿಂದಲೇ ವಿದ್ಯಾರ್ಥಿಗಳ ದಾಖಲಾತಿಗೆ ಸತತ ಪ್ರಯತ್ನ ಮಾಡಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

‘ಕಲಾ ವಿಭಾಗಕ್ಕಿಂತ ವಾಣಿಜ್ಯ ವಿಭಾಗದ ಕೋರ್ಸ್ಗಳಿಗೆ ಹೆಚ್ಚಿನ ಅವಕಾಶಗಳಿವೆ. ಬಿ.ಕಾಂ, ಎಂಬಿಎ ಪದವಿ ಪಡೆದರೆ ಕಾರ್ಖಾನೆ, ಖಾಸಗಿ ಬೃಹತ್ ಉದ್ಯಮಗಳಲ್ಲಿ ಸಾವಿರಾರು ಉದ್ಯೋಗ ಅವಕಾಶಗಳಿವೆ. ಹೀಗಾಗಿ ಕಾಮರ್ಸ್ ಆಯ್ಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

‘ನಮ್ಮೂರಿನ ಮಕ್ಕಳು ಕಾಲೇಜಿಗೆ ದೂರದ ಪಟ್ಟಣಗಳಿಗೆ ಅಲೆದಾಟವನ್ನು ತಪ್ಪಿಸಲು ಗ್ರಾಮದಲ್ಲೇ ಕಾಲೇಜು ಮಂಜೂರು ಮಾಡಿಸಲಾಗಿದೆ. ಗ್ರಾಮಸ್ಥರು ತಮ್ಮ ಮಕ್ಕಳಿಗೆ ಹೊಸ ಕಾಲೇಜಿಗೆ ದಾಖಲಾತಿ ಮಾಡಿಸಿ’ ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.

ಕಲಾ ವಿಭಾಗಕ್ಕೆ ಬೇಡಿಕೆ: ‘ಪ್ರಸ್ತುತ ಉನ್ನತೀಕರಿಸಿದ ಈ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮಾತ್ರ ಆರಂಭಿಸಲು ಸರ್ಕಾರ ಅನುಮತಿಸಿದೆ. ಆದರೆ, ನಮ್ಮ ಭಾಗದಲ್ಲಿ ಕಲಾ ವಿಭಾಗಕ್ಕೆ ಹೆಚ್ಚಿನ ಬೇಡಿಕೆಯಿದೆ’ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ಕಂದಕೂರ ಕರೆ ಮಾಡಿ, ನೂತನ ಕಾಲೇಜಿನಲ್ಲಿ ಕಲಾ ವಿಭಾಗದ ಸ್ಥಾಪನೆ ಕುರಿತು ಮನವಿ ಮಾಡಿದರು. ಸಚಿವ ಮಧು ಬಂಗಾರಪ್ಪ ಅವರು ಸಕಾರಾತ್ಮಕ ಸ್ಪಂದಿಸಿದ್ದು, ಪರಿಶೀಲಿಸಿ ಕ್ರಮವಹಿಸುವ ಭರವಸೆ ನೀಡಿದ್ದಾರೆ.

ನಂತರ ಇಲಾಖೆಯ ಕಾರ್ಯದರ್ಶಿ ರಶ್ಮಿ ಅವರಿಗೆ ಕರೆ ಮಾಡಿದ ಶಾಸಕರು, ಕಾಲೇಜಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು. ಡಿಡಿಪಿಯು ಪಂಡಿತರಾವ ಪವಾರ, ಬಿಇಒ ವೀರಣ್ಣ ಕನ್ನಳ್ಳಿ, ಶರಣಗೌಡ ಆಶನಾಳ, ಎಸ್ಡಿಎಂಸಿ ಅಧ್ಯಕ್ಷ ವೆಂಕಟರಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-30-1119310391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.