ಶಿಡ್ಲಘಟ್ಟ: ಪಶು ವೈದ್ಯಕೀಯ, ತೋಟಗಾರಿಕೆ ಪದವಿ, ಕೃಷಿ ಪದವಿ ಸೇರಿದಂತೆ ವಿವಿಧ ಪದವಿ ತರಗತಿಗಳಿಗೆ ಸೇರಬಯಸುವ ರೈತರ ಮಕ್ಕಳಿಗೆ ವಿಕಸಿತ್ 47 ಅಕಾಡೆಮಿ ತಾಲ್ಲೂಕಿನ ಕಾಚಹಳ್ಳಿ ಗೇಟ್ನ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಮಾರ್ಚ್ 27ರ ಶುಕ್ರವಾರ ಒಂದು ದಿನದ ಉಚಿತ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದೆ.

ಕೃಷಿಗೆ ಸಂಬಂಧಿಸಿದಂತೆ ವಿವಿಧ ಪದವಿಗಳಿಗೆ ರೈತರ ಮಕ್ಕಳಿಗೆ ಶೇ 50ರಷ್ಟು ಮೀಸಲು ಇದ್ದು ಪ್ರವೇಶ ಪಡೆಯಲು ಕೆಸಿಇಟಿ ಜತೆಗೆ ಆಯಾ ವಿಶ್ವವಿದ್ಯಾಲಯಗಳು ನಡೆಸುವ ಕೃಷಿ ಪ್ರಾಯೋಗಿಕ ಪರೀಕ್ಷೆ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ತರಬೇತಿ ಕಾರ್ಯಾಗಾರವು ಅನುಕೂಲ ಆಗಲಿದೆ.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಅನುಕೂಲ ಪಡೆದುಕೊಳ್ಳಬೇಕೆಂದು ವಿಕಸಿತ್ 47 ಅಕಾಡೆಮಿ ಮುಖ್ಯಸ್ಥ ಎಚ್.ಎನ್.ತೇಜಸ್ ಮನವಿ ಮಾಡಿದ್ದಾರೆ.

ಹೆಚ್ಚಿನ ವಿವರಗಳಿಗೆ ಮತ್ತು ನೋಂದಾಯಿಸಿಕೊಳ್ಳಲು ತ್ಯಾಗರಾಜ್, ಮೊ: 8217413646, 7019336530 ಸಂಪರ್ಕಿಸಲು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-16-1080776272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.