ಶಿವಮೊಗ್ಗ: ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮೊದಲನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತವಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಆಯಾ ಜಿಲ್ಲಾ, ತಾಲ್ಲೂಕು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಕಳುಹಿಸಬೇಕು. ವಿಳಾಸ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ -575004 ಇಲ್ಲಿಗೆ ಮೇ 16 ರೊಳಗಾಗಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ₹2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ₹1 ಲಕ್ಷ ಇರಬೇಕು. ಅಭ್ಯರ್ಥಿಯು 10ನೇ ತರಗತಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಮತ್ತು ಸರಾಸರಿ ಶೇ 45ರಷ್ಟು ಅಂಕಗಳನ್ನು ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ 0824-2225078ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-42-1961906905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.