ಸಿರವಾರ: ‘ಪದವಿ ಮುಗಿದ ಬಳಿಕ ಉನ್ನತ ವ್ಯಾಸಂಗ ಮಾಡಲು ವಿದ್ಯಾರ್ಥಿ ವೇತನ ಸೌಲಭ್ಯಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಅತ್ಯುನ್ನತ ಸ್ಥಾನ ಪಡೆಯಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ ಕೊರಪುರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಐಕ್ಯೂಎಸಿ ಮತ್ತು ವಿದ್ಯಾರ್ಥಿ ವೇತನ ಕೋಶದ ವತಿಯಿಂದ ಗುರುವಾರ ನಡೆದ ವಿದ್ಯಾರ್ಥಿ ವೇತನದ ಕುರಿತ ಮಾಹಿತಿ ಕಾರ್ಯಕ್ರಮ ಮತ್ತು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಹಣಕಾಸಿನ ಕೊರತೆ, ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾ ಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ಹಲವಾರು ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ರೂಪಿಸಿದೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು’ ಎಂದರು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿ ವೇತನ ಕೋಶದ ಸಂಯೋಜಕ ಎಸ್.ಸುಬಾನ್ ಸಾಬ್ ಪದವಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ನೀಡಿದರು.

ಕವಿತಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಪ್ರೇಮಾ ಮಾತನಾಡಿ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ನಾಯಕತ್ವ, ಸವಾಲುಗಳು ಮತ್ತು ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವಿ.ವಿನಯ ಶಂಕರ ನಿರೂಪಿಸಿದರು. ಮಹಿಳಾ ಸಬಲೀಕರಣದ ಸಂಯೋಜಕಿ ಪದ್ಮಾವತಿ, ಕನ್ನಡ ಭಾಷಾ ವಿಭಾಗದ ಉಪನ್ಯಾಸಕ ಹಂದೇರ ಮೂಗವ್ವ, ಸಹಾಯಕ ಪ್ರಾಧ್ಯಾಪಕ ಲಕ್ಷ್ಮಣ ಯಾದವ, ಮುತ್ತಪ್ಪ, ಅಶೋಕ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-32-1406980066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.