ಅಥಣಿ: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬರುವ ಮೇ 24ರಂದು ಇಲ್ಲಿನ ಕೃಷ್ಣಾ ರೈತ ಭವನದಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅವರು ಪಟ್ಟಣದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅಥಣಿ ತಾಲ್ಲೂಕಿನ 94 ಪ್ರೌಢಶಾಲೆಯ, 32 ಪದವಿ ಪೂರ್ವ ಮಹಾವಿದ್ಯಾಲಯಗಳ ಶೇ 85 ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಒಟ್ಟು 2200 ಕ್ಕೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ತಾಲ್ಲೂಕಿನ ಕಟಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾಳೆ. ಕೈಗಳಿಗೆ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದುಕೊಂಡು ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ. ಸವದಿ ಗ್ರಾಮದ ರೈತನ ಮಗ ಬಸವರಾಜ ಕೆಂಪವಾಡ ಐಎಫ್ಎಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಇಂತಹ ಸಾಧಕರನ್ನು ಗೌರವಿಸುವುದರ ಜೊತೆಗೆ ಸಾವಿರಾರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ವಿದ್ಯಾರ್ಥಿಗಳಿಗೆ ಬ್ಯಾಗ್, ವಾಟರ್ ಬಾಟಲ್, ಶಾಲು ನೀಡಲಾಗುವುದು ಎಂ ದರು.

ಯುವ ಮುಖಂಡ ಚಿದಾನಂದ ಸವದಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜೆ, ಮಹಾದೇವ ಬಿಳಿಕುರಿ, ದಿಲೀಪ ಲೋಣಾರಿ, ರಾವಸಾಬ ಐಹೊಳೆ, ಮಲ್ಲಿಕಾರ್ಜುನ ಬುಟಾಳಿ, ರಾಜು ಗುಡೋಡಗಿ, ಕಲ್ಲೇಶ ಮಡ್ಡಿ, ಶಶಿಕಾಂತ ಹುಲಕುಂದ, ಸಯ್ಯದ ಅಮೀನ ಗದ್ಯಾಳ, ಬಸವರಾಜ ನಾಯಿಕ, ಎ.ಎಮ್. ಖೊಬ್ರಿ, ಸುಶೀಲಕುಮಾರ ಪತ್ತಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-21-1446902207

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.